ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ಜೈರಾಜ್ ಬಿ ರೈ ಮತ್ತು ಸೌಮ್ಯ ಜೆ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದರು. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದವರು ತಿಳಿಸಿದರು.
ಶ್ರೀ ವೈಷ್ಣವಿ ದುರ್ಗಾ ದೇವಸ್ಥಾನ ದಶರಥ ನಗರ ಮಣಿಪಾಲದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ ಹೆಗ್ಡೆ ತೆನೆ ವಿತರಿಸಿದರು. ಈಎಸ್ ಎಂ ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಒಂದು ಕ್ರೀಯಾಶೀಲ ತಂಡವು ಕೆಲಸ ಮಾಡುತ್ತಿದೆ. ಇದರಿಂದ ಸಮಾರಂಭವು ಯಶಸ್ವಿಯಾಗುತ್ತಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜ, , ವಸಂತ ಶೆಟ್ಟಿ, ಶರ್ಮಿಳಾ ಎಸ್ ಆಳ್ವ, ಭಾರತಿ ಜಿ ಶೆಟ್ಟಿ, ಅರುಣಾ ಎಸ್ ಶೆಟ್ಟಿ, ಆಶಾ ಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು. ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…