ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪತಿಯ ಮೈಮೇಲೆ ಮೆಣಸಿನ ಹುಡಿ ಹಾಕಿ ಕುದಿಯುವ ನೀರು ಎರಚಿದ ಪತ್ನಿ!!!

ಉಡುಪಿ: ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪರಿಣಾಮ ಪತಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮೊಹಮ್ಮದ್ ಅಶ್ರಫ್ (22) ಗಾಯಗೊಂಡ ವ್ಯಕ್ತಿ. ಮೊಹಮ್ಮದ್ ಅಶ್ರಫ್ ಗೆ ಅವರ ಪತ್ನಿ ಅಫ್ರೀನ್, ಅತ್ತೆ, ಮಾವ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹಮ್ಮದ್‌ ಆಸೀಫ್‌ ಅವರ ಎಡ ಬದಿಯ ಮುಖ, ದೇಹ, ಎಡಗೈ, ಎಡ ಬದಿಯ ಎದೆ, ಬೆನ್ನು ಬಲಕೈ ಗೆ ಗುಳ್ಳೆ ಎದ್ದಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೊಹಮ್ಮದ್‌ ಆಸೀಫ್‌ ಕಾರ್ಕಳ ತಾಲೂಕಿನವರಾಗಿದ್ದು 11 ತಿಂಗಳ ಹಿಂದೆ ಉಡುಪಿ ತಾಲೂಕು ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿನ ನಿವಾಸಿ ಅಫ್ರೀನ್‌ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಬಳಿಕ ಅಫ್ರೀನ್‌ ಳು ಒಂದೂವರೆ ತಿಂಗಳು ಗಂಡನ ಮನೆಯಲ್ಲಿದ್ದು, ಬಳಿಕ ಅಲ್ಲಿ ಇರಲು ಇಷ್ಟವಿಲ್ಲವೆಂದು ಮಣಿಪುರದ ತನ್ನ ತವರು ಮನೆಗೆ ಬಂದಿದ್ದಳು. ಗಂಡ ಮೊಹಮ್ಮದ್‌ ಆಸೀಫ್‌ ಕೂಡಾ ತನ್ನ ಮನೆಯಲ್ಲಿಯೇ ಇರ ಬಹುದೆಂದು ತಿಳಿಸಿದ ಮೇರೆಗೆ ಅವರು ಸುಮಾರು 9 ತಿಂಗಳುಗಳಿಂದ ಹೆಂಡತಿಯ ಮನೆಯಲ್ಲಿಯೇ ವಾಸವಿದ್ದಾರೆ. ಅಫ್ರೀನ್‌ ಳಿಗೆ ಗಂಡ ಮೊಹಮ್ಮದ್‌ ಆಸೀಫ್‌ ಗೆ ಬೇರೆ ಹುಡುಗಿಯ ಜತೆ ಸಂಬಂಧ ಇದೆ ಎಂಬ ಅನುಮಾನವಿದ್ದು, ಈ ಬಗ್ಗೆ ಯಾವಾಗಲೂ ಗಂಡನ ಜತೆ ಜಗಳವಾಡುತ್ತಿದ್ದಳು.

ಸೆ. 17 ರಂದು ಸಂಜೆ 6:45 ಗಂಟೆಗೆ ಮೊಹಮ್ಮದ್‌ ಆಸೀಫ್‌ ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುತ್ತಿದ್ದ ಸಮಯ ಪತ್ನಿ ಅಫ್ರೀನ್‌ ಹೊರಗಿನಿಂದ ಬಾಗಿಲು ಬಡಿದಿದ್ದು, ಮೊಹಮ್ಮದ್‌ ಆಸೀಫ್‌ ಬಾಗಿಲನ್ನು ತೆರೆದಾಗ ಆಕೆ ತನ್ನ ಕೈಯಲ್ಲಿದ್ದ ಸ್ಟೀಲಿನ ಪಾತ್ರೆಯಲ್ಲಿದ್ದ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಗಂಡನ ಮೈ ಮೇಲೆ ಎರಚಿದ್ದಾಳೆ. ಮೊಹಮ್ಮದ್‌ ಆಸೀಫ್‌ ಕೂಗಾಡುತ್ತಾ ಮನೆಯಿಂದ ಹೊರಗಡೆ ಓಡಿದ್ದು, ಆಗ ಮಾವ ಹುಸೈನ್‌ ಅವರು ಮೊಹಮ್ಮದ್‌ ಆಸೀಫ್‌ ಅವರನ್ನು ಸಮಧಾನಪಡಿಸಿ ಮನೆಯೊಳಗೆ ಕರೆದುಕೊಂಡು ಹೋಗಿದ್ದಾರೆ.

ಮೈಮೇಲೆ ಬಿಸಿ ನೀರನ್ನು ಹಾಕಿದ ಪರಿಣಾಮ ಮೊಹಮ್ಮದ್‌ ಆಸೀಫ್‌ ಅವರ ದೇಹದಲ್ಲಿ ಗುಳ್ಳೆ ಎದ್ದಿದ್ದು, ಈ ಬಗ್ಗೆ ಆಸ್ಪತ್ರೆಗೆ ಹೋಗುತ್ತೇನೆಂದು ತಿಳಿಸಿದಾಗ ಅಫ್ರೀನ್‌, ಅತ್ತೆ ಮೈಮುನಾ, ಮಾವ ಹುಸೈನ್‌ ಹಾಗೂ ನೆರೆಮನೆಯ ಲತೀಫ್‌ ಆವರು ಸೇರಿ ಹೊರಗಡೆ ಹೋಗಲು ಬಿಡದೆ ಅವರನ್ನು ಮನೆಯ ರೂಮಿನಲ್ಲಿಯೇ ಕೂಡಿ ಹಾಕಿರುತ್ತಾರೆ. ಅಲ್ಲದೆ ಅಫ್ರೀನ್‌ಳು ಮೊಹಮ್ಮದ್‌ ಆಸೀಫ್‌ ರವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಳೆ.
ಕಾಪು ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!