ಜನ ಮನದ ನಾಡಿ ಮಿಡಿತ

Advertisement

ಖ್ಯಾತ ನಟ ವಿಜಯ್ ಪುತ್ರಿ ಖಿನ್ನತೆಯಿಂದ ಆತ್ಮಹತ್ಯೆ

ಚೆನ್ನೈ: ಖ್ಯಾತ ತಮಿಳು ನಟ ವಿಜಯ್ ಆಂಟೋನಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಅವರು ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

16 ವರ್ಷದ ಮಗಳು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.  ವರದಿಗಳ ಪ್ರಕಾರ, ಮೀರಾ ಚೆನ್ನೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರು. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ವರದಿಗಳ ಪ್ರಕಾರ, ಅವರು ಒತ್ತಡದಲ್ಲಿದ್ದರು ಮತ್ತು ಅದಕ್ಕಾಗಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಮೀರಾ ಚೆನ್ನೈನ ಚರ್ಚ್ ಪಾರ್ಕ್ ಶಾಲೆಯಲ್ಲಿ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೀರಾ ಇತ್ತೀಚಿನ ದಿನಗಳಲ್ಲಿ ತುಂಬಾ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಅವರು ತನ್ನ ರೂಮ್​ನಲ್ಲಿ ಮಲಗಲು ಹೋಗಿದ್ದರು. ಮುಂಜಾನೆ 3 ಘಂಟೆ ಸುಮಾರಿಗೆ ತಂದೆ ವಿಜಯ್​ ಮಗಳ ರೂಮ್​ಗೆ ತೆರಳಿದ್ದರು. ಈ ವೇಳೆ ಆಕೆ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!