ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಕಾರು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು. ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಡಿಕ್ಕಿಯಾಗಿ ಸೇತುವೆ ಮೇಲಿದ್ದ ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು. ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.
ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ. ಟ್ರಾಫಿಕ್ ಎಸ್.ಐ.ಸುತೇಶ್, ಎ.ಎಸ್.ಐ.ಸುರೇಶ್ ಹಾಗೂ ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…