ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಡಿವೈಡರ್ ನ ಮೇಲೆ ಕೂಲಿ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾರು ಹರಿದು ಗಾಯಗೊಂಡ ಘಟನೆ ನಡೆದಿದೆ.

ಹಾವೇರಿ ಮೂಲದ ನಾಗರಾಜ್ ಲಮಾಣಿ ಗಾಯಗೊಂಡ ಕಾರ್ಮಿಕ. ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಡಿವೈಡರ್ ಮೇಲೆ ಹತ್ತಿದೆ. ಈ ಸಂದರ್ಭದಲ್ಲಿ ಡಿವೈಡರ್ ನಲ್ಲಿ ಹುಲ್ಲು ತೆಗೆಯುವ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಡಿಕ್ಕಿಯಾಗಿದೆ. ಮತ್ತೆ ಕಾರು ವಿರುದ್ದ ರಸ್ತೆಗೆ ಮುನ್ನುಗ್ಗಿದೆ. ಅದೇ ಸಮಯದಲ್ಲಿ ರಸ್ತೆಯಲ್ಲಿ ಬರುತ್ತಿದ್ದ ಕಾರು ಮತ್ತು ಬೈಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್ ಜಖಂಗೊಂಡಿದೆ. ಅದರೆ ಎರಡು ವಾಹನದಲ್ಲಿದ್ದ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಡಿವೈಡರ್ ಮೇಲೆ ಗಾಯಗೊಂಡ ಕೂಲಿ ಕಾರ್ಮಿಕನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್, ಎ.ಎಸ್. ಐ.ವಿಜಯ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



