ಮುಲ್ಕಿ:2023ನೇ ಸಾಲಿನ ಮುಲ್ಕಿ ಸೀಮೆ ಅರಸು ಕಂಬಳದ ದಿನಾಂಕವನ್ನು ನಿರ್ಧರಿಸುವ ಬಗ್ಗೆ ಪಡುಪಣಂಬೂರಿನ ಮುಲ್ಕಿ ಅರಮನೆ ಧರ್ಮ ಚಾವಡಿಯಲ್ಲಿ ಸೀಮೆಯ ಅರಸು ಕಂಬಳ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆಯಿತು.
ಸಭೆಯಲ್ಲಿ ಡಿ. 24ರಂದು ಸೀಮೆಯ ಅರಸು ಕಂಬಳ ನಡೆಸಲು ನಿರ್ಧರಿಸಲಾಯಿತು. ನವೆಂಬರ್ 19ರಂದು ಕಂಬಳಗದ್ದೆಯಲ್ಲಿ ಕೋಣಗಳನ್ನು ಇಳಿಸುವ ಕಾರ್ಯಕ್ರಮ,ಡಿಸೆಂಬರ್ 17ರಂದು ಕುದಿ ಕಂಬಳ, ನಡೆಸುವುದಾಗಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಸುಮಾರು 400 ವರ್ಷ ಇತಿಹಾಸದ ಸೀಮೆಯ ಅರಸು ಕಂಬಳವನ್ನು ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.
ಸಭೆಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡ್ ಗುತ್ತು, ವಕೀಲರಾದ ಚಂದ್ರಶೇಖರ್, ಸಮಿತಿಯ ಶ್ಯಾಮ್ ಪ್ರಸಾದ್, ಬಂಕಿ ನಾಯಕರು, ಅನಿಲ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಸತೀಶ್ ಶೆಟ್ಟಿ, ಹೇಮನಾಥ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…