ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಸ್ವಾಮೀಜಿ ಅಭಿನವ ಹಾಲಶ್ರೀ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಗಡಗಲಿ ಮಠದಲ್ಲಿ ಮಹಜರು ನಡೆಸಿದ್ದಾರೆ.

ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಮಹಾಸಂಸ್ಥಾನ ಮಠದಲ್ಲಿ, ಸ್ವಾಮೀಜಿಯವರನ್ನು 2 ಗಂಟೆಗೂ ಹೆಚ್ಚು ಕಾಲ ಸಿಸಿಬಿ ಪೊಲೀಸರು ಮಹಜರು ಮಾಡಿದ್ದಾರೆ. ಈ ವೇಳೆ ಹಾಲಶ್ರೀ ಜೊತೆಗೆ ಕುಟುಂಬಸ್ಥರು ಮಾತನಾಡಲು ಅವಕಾಶ ಕೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಒಳಗಡೆ ಅವಕಾಶ ಇಲ್ಲ, ಹೊರಗಡೆ ಬಂದಾಗಲೇ ಮಾತನಾಡುವಂತೆ ತಿಳಿಸಿದ್ದಾರೆ. ಆದರೆ ಕುಟುಂಬಸ್ಥರ ಜೊತೆಗೆ ಮಾತನಾಡಲು ಹಾಲಶ್ರೀ ಮುಜುಗರಗೊಂಡಿದ್ದಾರೆ. ಇದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.



