ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್‌ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.
ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…