ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ನಡೆದಿದೆ.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದಲ್ಲಿ, ಅರ್ಚಕ ಮಧುಸೂದನ್ ಆಚಾರ್ಯ ನೇತೃತ್ವದಲ್ಲಿ ಗಣಹೋಮ, ಮಹಾಪೂಜೆ, ರಂಗ ಪೂಜೆ ನಡೆದಿದೆ. ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹುಲಿವೇಷಗಳು ರಾರಾಜಿಸಿದ್ದು, ಜನರ ಗಮನಸೆಳೆದಿದೆ. ಸಾವಿರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು, ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…