ಜನ ಮನದ ನಾಡಿ ಮಿಡಿತ

Advertisement

ಖಾಕಿ ಮೊಬೈಲ್‌ ಮೇಲೆ ಕಳ್ಳನ ಕಣ್ಣು..! ಮೊಬೈಲ್‌ ಎಸ್ಕೇಪ್….‌

ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್‌ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.


ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.

ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮ‌ನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!