ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.
ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…