ಮಂಗಳೂರು: ಬಂಟರಲ್ಲಿ ನಾಯಕತ್ವದ ಗುಣಗಳಿವೆ, ವೈದ್ಯಕೀಯ ಕ್ಷೇತ್ರ, ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಹೋಟೆಲ್ ಉದ್ಯಮ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲಿ ಇಂದು ಬಂಟರು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ, ಅಂತಹ ನಾಯಕತ್ವ ನಮಗೆ ಅ ಅಗತ್ಯವಾಗಿದೆ. ಬಂಟ ಸಮಾಜದ ಮಹಿಳೆಯರು ಕೂಡ ಸಾಕಷ್ಟು ಪ್ರಬಲರಾಗಿದ್ದಾರೆ, ಇತರರಿಗೆ ಮಾದರಿಯಾಗಿ ಬೆಳದಿದ್ದಾರೆ. ಇನ್ನು ಮುಂದೆಯೂ ಸಾಮಾಜಿಕವಾಗಿ ಹೆಚ್ಚೆಚ್ಚು ಪ್ರಬಲವಾಗಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಯೋಜಿಸುತ್ತಾ ಸಮಾಜದಲ್ಲಿ ಒಗ್ಗಟ್ಟನ್ನು ಉಳಿಸಿ ಅಭಿವೃದ್ಧಿಗೆ ಕೊಡುಗೆ ಕೊಡಿ, ವಿಘ್ನ ನಿವಾರಕ ಗಣೇಶನ ಆಶೀರ್ವಾದ ನಮ್ಮ ನಿಮ್ಮೆಲ್ಲರ ಮೇಲಿರಲಿ” ಎಂದು ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಎರಡನೇ ದಿನದ ಧಾರ್ಮಿಕ ಸಭೆಯಲ್ಲಿ ಮಾತಾಡಿದರು.
ಬಳಿಕ ಸಭೆಯನ್ನುದ್ದೇಶಿಸಿ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ”ಜಗತ್ತಿನಲ್ಲಿ ಮೊದಲನೇ ಸಲ್ಲುವುದು ಗಣೇಶನಿಗೆ ಅದೇ ಗಣೇಶನ ಉತ್ಸವದ ನಿಮಿತ್ತ ನಾವಿಂದು ಜೊತೆ ಸೇರಿದ್ದೇವೆ. ಬಂಟರು, ನಾಡವರು ಅಂದರೆ ಶಕ್ತಿವಂತರು. ಇದ ಕಾರಣಕ್ಕೆ ಎಂಟೆದೆಯ ಬಂಟ ಎನ್ನುತ್ತಾರೆ. ಒಬ್ಬ ಬಂಟ ನಮ್ಮ ಬಳಗದಲ್ಲಿ ಇದ್ದರೆ ನಮಗೆ ಎಲ್ಲಿಲ್ಲದ ಧೈರ್ಯ ನಾಯಕತ್ವ ಗುಣಗಳಿಗೆ ಹೆಸರಾರ ಬಂಟರು ಇದೇ ರೀತಿ ಸಮಾಜದಲ್ಲಿ ಎಲ್ಲಾ ವರ್ಗದ ಜನರನ್ನು ಒಂದೇ ವೇದಿಕೆಯಲ್ಲಿ ತರುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರಲಿ” ಎಂದರು.
ಮಾತು ಮುಂದುವರಿಸಿದ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಸದಾಶಿವ ಶೆಟ್ಟಿ ಕನ್ಯಾನ ಅವರು, “ಶಿಕ್ಷಣ ಇಂದು ಅತೀ ಅವಶ್ಯವಾಗಿದೆ. ನಾನು ಕೂಡ ಬಂಟರ ಸಂಘದ ನೆರವಿನಿಂದ ಶಿಕ್ಷಣ ಪಡೆದು ಈ ಮಟ್ಟಕ್ಕೆ ಏರಿದ್ದೇನೆ. ಶಿಕ್ಷಣದ ಮಹತ್ವವನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಶಿಕ್ಷಣದಿಂದ ಪ್ರಗತಿ ಸಾಧ್ಯ’ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಎಸ್.ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ಆಡಳಿತ ನಿರ್ದೇಶಕ ಸದಾಶಿವ ಶೆಟ್ಟಿ ಕನ್ಯಾನ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್ ಕುಮಾರ್ ರೈ, ಮಾಲಾಡಿ ಬ್ಯಾಂಕ್ ಆಫ್ ಬರೋಡ ಗೋನಲ್ ಹೆಡ್ ಗಾಯತ್ರಿ ಆರ್. ಮುಂಬೈ ಉದ್ಯಮಿ ಕೆ.ಕೆ. ಶೆಟ್ಟಿ ಕಾಸರಗೋಡು, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಮುರಳಿಧರ ಹೆಗ್ಡೆ, ಮೊಗವೀರ ಮಹಾಸಭಾ ಉತೈಲ ಇದರ ಅಧ್ಯಕ್ಷ ಜಯ ಸಿ. ಸುವರ್ಣ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಲಯನ್ಸ್ ಗವರ್ನರ್ ಮೆಲ್ವಿನ್ ಡಿಸೋಜ, ದ.ಕ. ಜಿಲ್ಲಾ ಸಂಚಾಲಕ ಬಿ.ನಾಗರಾಜ್ ಶೆಟ್ಟಿ, ಕಾಸರಗೋಡು ಜಿ ಸಂಚಾಲಕ ಸಂಜೀವ ಶೆಟ್ಟಿ, ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿ.ಎ. ರಾಮ ಮೋಹನ್ ರೈ, ಸಂಜೀವ ಶೆಟ್ಟಿ ಸಂಪಿಗೆ ಅಡಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧಕಿ ಡಾ. ಅಮೃತ ಭಂಡಾರಿ, ಕಂಬಳ ಕ್ಷೇತ್ರದ ಸಾಧಕ ಹೊಳಚೂರು ಕೊಂಡಟ್ಟು ಸುಕುಮಾರ್ ಶೆಟ್ಟಿ ಕೈಗಾರಿಕಾ ಕ್ಷೇತ್ರದ ಸಾಧಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿದರು, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮಾನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಅತಿಥಿಗಳನ್ನು ಸ್ವಾಗತಿಸಿದರು. ಆಶಾಜ್ಯೋತಿ ರೈ ವಂದಿಸಿದರು. ಮಂಜುಳಾ ಶೆಟ್ಟಿ, ಪ್ರಕಾಶ್ ಮಲಾಂಬ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…