ಜನ ಮನದ ನಾಡಿ ಮಿಡಿತ

Advertisement

2022-23 ನೇ ಸಾಲಿನಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದಿಂದ ಒಟ್ಟು 376.85 ಕೋ.ರೂ.ವ್ಯವಹಾರ; 1.50 ಕೋ.ರೂ.ನಿವ್ವಳ ಲಾಭ….!!

ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ವು 2022-23 ನೇ ಸಾಲಿನಲ್ಲಿ ಒಟ್ಟು 376.85 ಕೋ.ರೂ.ವ್ಯವಹಾರ ನಡೆಸಿ,1.50 ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು‌ ಹೇಳಿದ್ದಾರೆ.


ಸಂಘದ ಕಚೇರಿ‌ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಇವರು ,ಪ್ರಸಕ್ತ ಸಾಲಿನ ವರ್ಷಾಂತ್ಯಕ್ಕೆ ಸಂಘದಲ್ಲಿ 46.04 ಕೋ.ರೂ. ಠೇವಣಿ ಇದ್ದು,173.35 ಕೋ.ರೂ.ದುಡಿಯುವ ಬಂಡವಾಳ 81.74 ಕೋ.ರೂ.ಸಾಲ ಹೊರ ಬಾಕಿ ಇದ್ದು, 14.12 ಕೋ.ರೂ.ಹೂಡಿಕೆಯನ್ನು ಹೊಂದಿದೆ. ಶೇ.99 ಸಾಲ ವಸೂಲಾತಿಯನ್ನು ಮಾಡಿದೆ. 1947 ರಲ್ಲಿ ಆಗಿನ ಸಹಕಾರಿ ಬಂಧುಗಳ ಸಹಕಾರದಲ್ಲಿ ಬಿ. ಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾದ ಸಿದ್ಧಕಟ್ಟೆ ಸಂಘವು ಪ್ರಸ್ತುತ ದಿನಗಳಲ್ಲಿ ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ ತೃಪ್ತಿಕರ ಸೇವೆಯನ್ನು ನೀಡುತ್ತಿದೆ. 2022-23 ನೇ ಸಾಲಿನಲ್ಲಿ ಉತ್ತಮ ಸಾಧನೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ವತಿಯಿಂದ ವಿಶೇಷ ಪ್ರೋತ್ಸಾಹಕ ಬಹುಮಾನ ಪಡೆದಿದ್ದೇವೆ. ಅಖಿಲ ಭಾರತ ಸಹಕಾರ ಸಪ್ತಾಹ -2022 ಅಂಗವಾಗಿ ದ.ಕ ಜಿಲ್ಲಾ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವನ್ನು ಸಂಘದ ಅವರಣದಲ್ಲಿ ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದರು.

2022-23 ನೇ ಸಾಲಿನಲ್ಲಿ 1166 ರೈತರ 1551 ಎಕ್ರೆಗೆ 40 ಲಕ್ಷಕ್ಕೂ ಹೆಚ್ಚು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಪ್ರೀಮಿಯಂ ಪಾವತಿಸಲಾಗಿದೆ. ಅದೇ ರೀತಿ ಸಂಘದ ಮೂಲಕ 486 ಕುಟುಂಬಗಳು 2,29,680 ರೂ‌. ವಿಮಾ ಮೊತ್ತವನ್ನು ಪಾವತಿಸಿ ಯಶಸ್ವಿನಿ ವಿಮಾ ಯೋಜನೆಗೆ ನೋಂದಣಿಯಾಗಿವೆ.
ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳನ್ನು ಮಹಾಸಭೆಯಲ್ಲಿ ಪುರಸ್ಕಾರಿಸಲಾಗುತ್ತಿದೆ. ಎಂಎಸ್ ಸಿ ಯೋಜನೆಯಡಿ 58 ಲಕ್ಷ ರೂ. ವೆಚ್ಚದಲ್ಲಿ ನೇತಾಜಿ ಬಹುಪಯೋಗಿ ಸೇವಾ ಕೇಂದ್ರ,ಸಂಘದ ಸ್ಥಾಪಕಾಧ್ಯಕ್ಷರಾದ ಬಿ. ಕೃಷ್ಣ ರೈ ಅವರ ನೆನಪಿಗಾಗಿ “ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ” ವನ್ನು ನಿರ್ಮಿಸಲಾಗಿದೆ. ಸಂಘದ ಅಮೃತಮಹೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ “ವೀರ ಸಾರ್ವಕರ್ ” ವಾಣಿಜ್ಯ ಸಂಕಿರ್ಣ ನಿರ್ಮಿಸಲಾಗಿದೆ ಎಂದರು.

ಈ ವೇಳೆ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಬೆಳಿಗ್ಗೆ 10.00 ಕ್ಕೆ ಶನಿವಾರ ಸಂಘದ ‘ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ’ದಲ್ಲಿ ಜರಗಲಿದ್ದು, ಸಂಘದ ಎಲ್ಲಾ ಸದಸ್ಯರು ಮಹಾಸಭೆಗೆ ಹಾಜರಾಗುವಂತೆ ವಿನಂತಿಸಿಕೊಂಡಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಸಂದೇಶ್ ಶೆಟ್ಟಿ ಪೊಡಂಬು, ದಿನೇಶ್ ಪೂಜಾರಿ ಹುಲಿಮರು, ವೀರಪ್ಪ, ವರವ , ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ, ಅರುಣಾ ಎಸ್.ಶೆಟ್ಟಿ, ಮಂದಾರತಿ ಎಸ್ . ಶೆಟ್ಟಿ ಪ್ರತಿಪರ ನಿರ್ದೇಶಕರಾದ ಮಾಧವ ಶೆಟ್ಟಿಗಾರ್, ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!