ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ವು 2022-23 ನೇ ಸಾಲಿನಲ್ಲಿ ಒಟ್ಟು 376.85 ಕೋ.ರೂ.ವ್ಯವಹಾರ ನಡೆಸಿ,1.50 ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.
ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಇವರು ,ಪ್ರಸಕ್ತ ಸಾಲಿನ ವರ್ಷಾಂತ್ಯಕ್ಕೆ ಸಂಘದಲ್ಲಿ 46.04 ಕೋ.ರೂ. ಠೇವಣಿ ಇದ್ದು,173.35 ಕೋ.ರೂ.ದುಡಿಯುವ ಬಂಡವಾಳ 81.74 ಕೋ.ರೂ.ಸಾಲ ಹೊರ ಬಾಕಿ ಇದ್ದು, 14.12 ಕೋ.ರೂ.ಹೂಡಿಕೆಯನ್ನು ಹೊಂದಿದೆ. ಶೇ.99 ಸಾಲ ವಸೂಲಾತಿಯನ್ನು ಮಾಡಿದೆ. 1947 ರಲ್ಲಿ ಆಗಿನ ಸಹಕಾರಿ ಬಂಧುಗಳ ಸಹಕಾರದಲ್ಲಿ ಬಿ. ಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾದ ಸಿದ್ಧಕಟ್ಟೆ ಸಂಘವು ಪ್ರಸ್ತುತ ದಿನಗಳಲ್ಲಿ ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ ತೃಪ್ತಿಕರ ಸೇವೆಯನ್ನು ನೀಡುತ್ತಿದೆ. 2022-23 ನೇ ಸಾಲಿನಲ್ಲಿ ಉತ್ತಮ ಸಾಧನೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ವಿಶೇಷ ಪ್ರೋತ್ಸಾಹಕ ಬಹುಮಾನ ಪಡೆದಿದ್ದೇವೆ. ಅಖಿಲ ಭಾರತ ಸಹಕಾರ ಸಪ್ತಾಹ -2022 ಅಂಗವಾಗಿ ದ.ಕ ಜಿಲ್ಲಾ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವನ್ನು ಸಂಘದ ಅವರಣದಲ್ಲಿ ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದರು.
2022-23 ನೇ ಸಾಲಿನಲ್ಲಿ 1166 ರೈತರ 1551 ಎಕ್ರೆಗೆ 40 ಲಕ್ಷಕ್ಕೂ ಹೆಚ್ಚು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಪ್ರೀಮಿಯಂ ಪಾವತಿಸಲಾಗಿದೆ. ಅದೇ ರೀತಿ ಸಂಘದ ಮೂಲಕ 486 ಕುಟುಂಬಗಳು 2,29,680 ರೂ. ವಿಮಾ ಮೊತ್ತವನ್ನು ಪಾವತಿಸಿ ಯಶಸ್ವಿನಿ ವಿಮಾ ಯೋಜನೆಗೆ ನೋಂದಣಿಯಾಗಿವೆ.
ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳನ್ನು ಮಹಾಸಭೆಯಲ್ಲಿ ಪುರಸ್ಕಾರಿಸಲಾಗುತ್ತಿದೆ. ಎಂಎಸ್ ಸಿ ಯೋಜನೆಯಡಿ 58 ಲಕ್ಷ ರೂ. ವೆಚ್ಚದಲ್ಲಿ ನೇತಾಜಿ ಬಹುಪಯೋಗಿ ಸೇವಾ ಕೇಂದ್ರ,ಸಂಘದ ಸ್ಥಾಪಕಾಧ್ಯಕ್ಷರಾದ ಬಿ. ಕೃಷ್ಣ ರೈ ಅವರ ನೆನಪಿಗಾಗಿ “ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ” ವನ್ನು ನಿರ್ಮಿಸಲಾಗಿದೆ. ಸಂಘದ ಅಮೃತಮಹೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ “ವೀರ ಸಾರ್ವಕರ್ ” ವಾಣಿಜ್ಯ ಸಂಕಿರ್ಣ ನಿರ್ಮಿಸಲಾಗಿದೆ ಎಂದರು.
ಈ ವೇಳೆ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಬೆಳಿಗ್ಗೆ 10.00 ಕ್ಕೆ ಶನಿವಾರ ಸಂಘದ ‘ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ’ದಲ್ಲಿ ಜರಗಲಿದ್ದು, ಸಂಘದ ಎಲ್ಲಾ ಸದಸ್ಯರು ಮಹಾಸಭೆಗೆ ಹಾಜರಾಗುವಂತೆ ವಿನಂತಿಸಿಕೊಂಡಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಸಂದೇಶ್ ಶೆಟ್ಟಿ ಪೊಡಂಬು, ದಿನೇಶ್ ಪೂಜಾರಿ ಹುಲಿಮರು, ವೀರಪ್ಪ, ವರವ , ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ, ಅರುಣಾ ಎಸ್.ಶೆಟ್ಟಿ, ಮಂದಾರತಿ ಎಸ್ . ಶೆಟ್ಟಿ ಪ್ರತಿಪರ ನಿರ್ದೇಶಕರಾದ ಮಾಧವ ಶೆಟ್ಟಿಗಾರ್, ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…