ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಪುತ್ತೂರು ಶಾಸಕರು

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು,ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.


ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು, ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಶಸ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.


ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ , ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!