ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ ನಡೆದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಈ ನಾಲ್ವರು ವಿದ್ಯಾರ್ಥಿಗಳು ಭಕ್ತರಲ್ಲಿಗೆ ಧನ ಸಂಗ್ರಹದ ಬಾಕ್ಸ್ ಗಳನ್ನು ಹಿಡಿದುಕೊಂಡು
ಹೋಗಿ ಸುಮಾರು 11,116 ರೂವನ್ನು ಸಂಗ್ರಹಿಸಿದ್ದು, ಇದನ್ನು ಕಲ್ಲಬೆಟ್ಟುವಿನ ಕಮಲಾಕ್ಷಿ ಅವರ ಚಿಕಿತ್ಸೆಗಾಗಿ ನೀಡಿದ್ದಾರೆ.
ಕೂಲಿ ಕಾರ್ಮಿಕೆಯಾಗಿರುವ ಕಮಲಾಕ್ಷಿ ಅವರು ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನ ಶುಚಿತ್ವಗೊಳಿಸುವ ಕೆಲಸವನ್ನು ನಿರ್ವಹಿಸುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಅವರು ರಕ್ತದೊತ್ತಡದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆಯನ್ನು ಪಡೆದುಕೊಂಡು
ನಂತರ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಅವರ ಪತಿಯೂ ಕೂಲಿಕಾರ್ಮಿಕರಾಗಿದ್ದು, ಬಡಕುಟುಂಬದವರಾಗಿರುವ ಇವರ ಸ್ಥಿತಿಯನ್ನು ಕಂಡ ವಿದ್ಯಾರ್ಥಿನಿಯರು ಧನ ಸಂಗ್ರಹ ಮಾಡಿ ಚಿಕಿತ್ಸೆಯ ನೆರವಿಗೆ ಸ್ಪಂದಿಸುತ್ತ ಈ ಕಾರ್ಯವನ್ನು ಕೈಗೊಂಡಿದ್ದರು. ಅದರಂತೆ ಸಂಗ್ರಹವಾಗಿರುವ ಧನವನ್ನು ಕಮಲಾಕ್ಷಿ ಅವರ ಮನೆಗೆ ತೆರಳಿ ಹಸ್ತಾಂತರಿಸುವ ಮೂಲಕ ಗಮನ ಸೆಳೆದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…