ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಪಕ್ಷಿಕೆರೆ ಸಂತ ಜೂದರ ಆಂಗ್ಲ ಮಾಧ್ಯಮ ಪ್ರೌಢಶಾಲೆ ವತಿಯಿಂದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟ ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಕ್ಷಿಕೆರೆ ಚರ್ಚ್ ಧರ್ಮಗುರು ಫಾ.ಮೆಲ್ವಿನ್ ನೊರೋಹ್ನ ವಹಿಸಿ ಮಾತನಾಡಿ ಕ್ರೀಡೆಯು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯವಾಗಿದ್ದು ಶಿಸ್ತು ಬದ್ಧವಾಗಿ ಭಾಗವಹಿಸುವ ಮುಖಾಂತರ ಜೀವನದಲ್ಲಿ ಗೌರವಪೂರ್ಣ ಸಾಧನೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ, ಮಂಗಳೂರು ಉತ್ತರ ವಲಯ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನೊ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹರಿಪ್ರಸಾದ್, ಸಿಆರ್ ಡಯಾನ, ಅನುದಾನಿತ ಶಾಲಾ ಸಂಘದ ಅಧ್ಯಕ್ಷ ಅಂಬರೀಶ್ ಲಮಾಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಕೆಮ್ರಾಲ್ ಗ್ರಾಪಂ ಪಿಡಿಒ ಅರುಣ್ ಪ್ರದೀಪ್ ಡಿಸೋಜಾ, ಶಾಲಾ ಮುಖ್ಯೋಪಾಧ್ಯಾಯನಿ ಎಸ್ಟರ್ ಪ್ರೇಮ ಮತ್ತಿತರರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಚೈತ್ರ ಧನ್ಯವಾದ ಅರ್ಪಿಸಿದರು. ಸ್ವೀಟಾ ನಿರೂಪಿಸಿದರು.



