ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ.
ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ ದುರ್ದೈವಿ.
ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು, ಕೃಷಿ ಮಾಡಿಕೊಂಡಿದ್ದರು.
ವಾಮದಪದವಿನ ಮನೆಯಿಂದ ಸಜೀಪ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಪವಿತ್ರ ಕನ್ಸ್ ಟ್ರಕ್ಷನ್ ಗೆ ಸೇರಿದ ಲಾರಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…