ಕರಾವಳಿ

ಯುವ ಮೋರ್ಚಾ ಬಂಟ್ವಾಳ ಮಂಡಲ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ ಯುವ ಮೋರ್ಚಾ ಬಂಟ್ವಾಳ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಬಿಸಿರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಜನ್ಮ ದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿ ಮಾದರಿಯ ನಡೆಯನ್ನು ಬಿಜೆಪಿ ಮಾಡುತ್ತಿದೆ. ಇನ್ನೊಂದು ಜೀವವನ್ನು ಉಳಿಸುವ ಪುಣ್ಯದ ಕಾರ್ಯ ರಕ್ತದಾನವಾಗಿದ್ದು,ಯುವಕರು ಇಂತಹ ಕೆಲಸಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಅವರು ತಿಳಿಸಿದರು.

ಇದೇ ಬಂಟ್ವಾಳ ಯುವಮೋರ್ಚಾದ ಕಾರ್ಯವನ್ನು ಶ್ಲಾಘಿಸಿದರು. ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು, ಅದಕ್ಕಾಗಿ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಂದಾಗಿ ಕೆಲಸ ಮಾಡಬೇಕು ಎಂದು ಅವರು ಕರೆನೀಡಿದರು‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ನಾಡಿನ ಸಮಸ್ತ ಜನತೆಗೆ ಅಗತ್ಯಕಾಲಕ್ಕೆ ಬೇಕಾಗುವ ರಕ್ತವನ್ನು ದಾನ ಮಾಡುವ ವಿಶೇಷ ಕಾರ್ಯಕ್ರಮದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನ್ಮಾದಿನಾಚರಣೆಯನ್ನು ಆಚರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸೇವಾ ಪಾಕ್ಷಿಕದ ಅಂಗವಾಗಿ ಯುವಮೋರ್ಚಾದ ವತಿಯಿಂದ ನಡೆದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರೆಡ್ ಕ್ರಾಸ್ ಸಂಸ್ಥೆಯ ರಕ್ತನಿಧಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ, ಪ್ರಮುಖರಾದ ಅರುಣ್ ರೋಶನ್ , ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ , ದಿನೇಶ್ ಶೆಟ್ಟಿ ದಂಬೆದಾರ್,ಆನಂದ ಶಂಭೂರು ಮತ್ತಿತರರು ಉಪಸ್ಥಿತರಿದ್ದರು.ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ ಸ್ವಾಗತಿಸಿದರು. ಅಶ್ವಥ್ ರಾವ್ ಬಾಳಿಕೆ ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…

1 hour ago

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…

1 hour ago

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…

1 hour ago

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…

1 hour ago

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…

1 hour ago

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…

1 hour ago