ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಾಳದ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದ ಮೇಲೆ ಮಾಜಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಿರ್ಮಿಸಲಾದ ಪರಶುರಾಮ ಮೂರ್ತಿ ಕಳಪೆ ಗುಣಮಟ್ಟದ್ದು, ಮೂರ್ತಿಯ ಗುಣಮಟ್ಟ ಉತ್ತಮ ಎಂದು ಹೇಳುವುದು ಕಷ್ಟ ಸಾಧ್ಯ ಎಂಬ ಅರ್ಥದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ.
ಪರಶುರಾಮ ಥೀಮ್ ಪಾರ್ಕ್‌ನ್ನು ಬಿಜೆಪಿ ಸರ್ಕಾರದ ಅವಧಿಯ ಕೊನೆಯಲ್ಲಿ ವಿಧಾನಸಭಾ ಚುನಾವಣೆಯ ಮೊದಲು ಮುಖ್ಯಮಂತ್ರಿ ಬೊಮ್ಮಯಿ ಉದ್ಘಾಟಿಸಿದ್ದರು.
15 ಕೋಟಿ ರು. ವೆಚ್ಚದಲ್ಲಿ, ಜನರ ತೆರಿಗೆ ದುಡ್ಡಿನಿಂದ ಬಂದ ಹಣದಲ್ಲಿ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಸುದ್ದಿ ಕರಾವಳಿವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂರ್ತಿಯನ್ನು ಪರಿಶೀಲಿಸಿ ಇದು ಅರ್ಧ ನಕಲಿ– ಅರ್ಧ ಅಸಲಿ ಎಂದು ಹೇಳಿ, ಇದರ ನಿರ್ಮಾಣಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅವ್ಯವಹಾರದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು, ಉಡುಪಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತನಿಖೆಗೆ ಒಳಪಡಿಸುವ ಅಗತ್ಯವಿದ್ದು ಈ ಬಗ್ಗೆ ಉಸ್ತುವಾರಿ ಸಚಿವರು ಸುಳಿವು ನೀಡಿದ್ದಾರೆ, ಸಚಿವೆಗೆ ಸರಿಯಾದ ಉತ್ತರವನ್ನು ನೀಡುವುದಕ್ಕೆ ತಡವರಿಸಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಸ್ತುವಾರಿ ಸಚಿವರ ತನಿಖೆ ವೇಳೆ ಮೂರ್ತಿ ಕಂಚಿನದಲ್ಲ, ಈಗಿರುವುದು ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮೂರ್ತಿ, ಅದನ್ನು ತೆಗೆದು ನೈಜ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು ಎಂದು ವರದಿಯಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈ ನಕಲಿ ಮೂರ್ತಿ ಸ್ಥಾಪನೆಯ ಬಗ್ಗೆ ವರದಿ ಪಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತಿಮೆ ನಿರ್ಮಾಣ ಮಾಡಿರುವ ಬೆಂಗಳೂರಿನ ಕಲಾವಿದರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…