ಮಂಗಳೂರು: ರಾಜ್ಯದಾದ್ಯಂತ ಹವಾಮಾನ ವೈಪರೀತ್ಯವಾಗುತ್ತಿದ್ದು ಕರಾವಳಿಯಾದ್ಯಂತ ಭಾನುವಾರ ಇಡೀ ದಿನ ಮೋಡ ಕವಿದ ವಾತಾವರಣ, ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಂದು (ಸೋಮವಾರ) ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರಿನಲ್ಲಿ ಭಾನುವಾರ ಹಗಲು ಹೊತ್ತು ಮಳೆ ಬಾರದಿದ್ದರೂ ಆಗಾಗ ತುಂತುರು ಮಳೆ ಹನಿದಿದೆ. ಉಳಿದಂತೆ ಮೋಡ ಕವಿದು ಮಳೆಯ ವಾತಾವರಣ ಕಂಡುಬಂದಿತ್ತು. ಇತ್ತೀಚೆಗೆ ಹವಾಮಾನದ ಅಸಮತೋಲನದಿಂದಾಗಿ ಜನರಲ್ಲಿ ಶೀತ ಬಾಧೆ, ಜ್ಚರ ಕಾಣಿಸಿಕೊಳ್ಳುತ್ತಿದ್ದು ಡೆಂಗ್ಯೂ ಭೀತಿ ಕೂಡಾ ಆರಂಭವಾಗಿದೆ. ಇನ್ನು ಉಳ್ಳಾಲದಲ್ಲಿ ಭಾನುವಾರ ಗರಿಷ್ಠ 55.1 ಮಿಲಿ. ಮೀಟರ್ ಮಳೆಯಾಗಿದ್ದು ಜಿಲ್ಲೆಯ ಸರಾಸರಿ ಮಳೆ 38.9 ಮೀ.ಮೀ ಆಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…