ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬೆಳಕಿಗೆ ಬಂದಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ.
ವಿಟ್ಲ ಸಿ.ಡಿ.ಪಿ.ಒ.ಇಲಾಖೆಯ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪ ನಡು ಗ್ರಾಮದ ಯುವಕನೋರ್ವನಿಗೆ ಮದುವೆ ನಡೆಸುವ ಉದ್ದೇಶದಿಂದ ನಿಶ್ಚಿತಾರ್ಥ ನಡೆದು , ಈ ದಿನ ಮದುವೆಗಾಗಿ ಹಾಲ್ ಕೂಡ ಫಿಕ್ಸ್ ಆಗಿತ್ತು.
ಮಿತ್ತಕೋಡಿ ರಾಯಲ್ ಗಾರ್ಡ್ ನಲ್ಲಿ ಇಂದು ಮದುವೆಗಾಗಿ ಎಲ್ಲಾ ತಯಾರಿಗಳು ನಡೆದಿತ್ತು.
ಬಾಲಕಿಯ ಮನೆಯಲ್ಲಿ ನಿನ್ನೆ ದಿನ ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿ.ಡಿ.ಪಿ.ಒ. ಇಲಾಖೆಯ ಹಿರಿಯ ಮೇಲ್ವಿಚಾರಕಿ, ಗ್ರಾ.ಪಂಪಿ.ಡಿ.ಒ. ತಾ.ಪ.ಇಒ, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರೆ.
ಅ ಬಳಿಕ ಮದುವೆ ಫಿಕ್ಸ್ ಆಗಿದ್ದ ವರನಕಡೆಯವರಿಗೆ ಮತ್ತು ಮದುವೆ ಹಾಲ್ ನ ಮಾಲಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ. ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.
ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹಕ್ಕೆ ತಯಾರಾಗುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಧಿಕಾರಿಗಳ ಕಾರ್ಯ ಪ್ರವೃತ್ತಿಯ ಕಾರಣ ಬೆಳಕಿಗೆ ಬಂದ ಪ್ರಕರಣಗಳನ್ನು ನಿಲ್ಲಿಸಲಾಗಿದೆ.
ಆದರೆ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುವ ಸಂಗತಿಗಳು ನಡೆಯುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಇಲಾಖೆಯ ಮುಖಾಂತರ ಸರಿಯಾದ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…