ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ಆದಿತ್ಯವಾರದಂದು ಬಂಟ್ವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು.

ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮದ ಕರಪತ್ರವನ್ನು ಅನಾವರಣಗೊಳಿಸಲಾಯಿತು. ಸಭೆಯಲ್ಲಿ ತುಳುನಾಡಿನ ಪ್ರತಿಷ್ಠಿತ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನೂತನ ಪೋಷಕರಾಗಿ ಸೇರ್ಪಡೆಯಾದ ಸುಧಾಕರ್ ಪೂಂಜ, ಜಗನ್ನಾಥ್ ಚೌಟ, ಲೋಕೇಶ್ ಶೆಟ್ಟಿ ಮತ್ತು ಸುರೇಶ್ ರೈ ಮಕರಜ್ಯೋತಿ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿಯವರನ್ನು ಬಂಟರ ಸಂಘ ಬಂಟ್ವಾಳ ತಾಲೂಕಿನ ಕಾರ್ಯದರ್ಶಿ ಜಗನ್ನಾಥ್ ಚೌಟರು ಪ್ರೀತಿಪೂರ್ವಕವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಸಂಚಾಲಕರು ಸಾಂಸ್ಕೃತಿಕ ಸಮಿತಿ, ಕರ್ನೂರು ಮೋಹನ್ ರೈ ಸಹ ಸಂಚಾಲಕರು ಸಾಂಸ್ಕೃತಿಕ ಸಮಿತಿ, ರೋಷನ್ ಕುಮಾರ್ ಶೆಟ್ಟಿ ಸಹ ಸಂಚಾಲಕರು ಕ್ರೀಡಾ ಸಮಿತಿ, ಮಹಿಳಾ ವಿಭಾಗದ ಸದಸ್ಯರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!