ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಫುಟ್‌ಬಾಲ್ ಟೂರ್ನಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಚಾಂಪಿಯನ್

ಮೂಡುಬಿದಿರೆ: ಪೆನಾಲ್ಟಿ ಶೂಟೌಟ್‌ನಲ್ಲಿ ಅಮೋಘ ಆಟ ಪ್ರದರ್ಶಿಸಿದ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈಸೂರು ವಲಯ ಅಂತರ ಕಾಲೇಜು ಪುರುಷರ ವಿಭಾಗದ ಫುಟ್‌ಬಾಲ್ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡಿತು.

ಇಲ್ಲಿನ ಆಳ್ವಾಸ್ ಕಾಲೇಜಿನ ಅರಮನೆ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಮತ್ತು ಕಣಚೂರು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ೦-೦ ಗೋಲುಗಳಿಂದ ಸಮಬಲ ಸಾಧಿಸಿತು. ಚಾಂಪಿಯನ್‌ಶಿಪ್ ನಿರ್ಧರಿಸುವ ನಿರ್ಣಾಯಕ ಪೆನಾಲ್ಟಿ ಶೂಟೌಟ್‌ನಲ್ಲಿ ಆಳ್ವಾಸ್‌ನ ಆಟಗಾರರು ಹೊಡೆದ ಎಲ್ಲ 5 ಕಿಕ್‌ಗಳು ಗೋಲನ್ನು ಮುತ್ತಿಕ್ಕಿದ್ದರೆ, ಕಣಚೂರು ತಂಡದ ಗೋಲು ಹೊಡೆಯುವ ಪ್ರಯತ್ನವನ್ನು ಆಳ್ವಾಸ್ ಗೋಲ್‌ಕೀಪರ್ ರುಮನ್ ಎರಡು ಬಾರಿ ವಿಫಲಗೊಳಿಸಿದರು. ಅಂತಿಮವಾಗಿ ಆಳ್ವಾಸ್ ತಂಡವು 5-3ಗೋಲುಗಳಿಂದ ಕಣಚೂರು ತಂಡವನ್ನು ಮಣಿಸಿ, ಪ್ರಶಸ್ತಿ ಜಯಿಸಿತು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ತಂಡವು 2-1 ಗೋಲುಗಳಿಂದ ಎಸ್‌ಸಿಎಸ್ ನರ್ಸಿಂಗ್ ಕಾಲೇಜು ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇನ್ನೊಂದು ಸೆಮಿಫೈನಲ್‌ನಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ತಂಡವನ್ನು 2-0 ಗೋಲುಗಳಿಂದ ಮಣಿಸಿದ ಕಣಚೂರು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಫೈನಲ್‌ಗೆ ಪ್ರವೇಶ ಪಡೆದಿತ್ತು. ಒಟ್ಟು 72 ತಂಡಗಳು ಸ್ಪರ್ಧಿಸಿದ್ದು, 1,150 ಆಟಗಾರರು ಟೂರ್ನಿಯಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!