ಮೂಡುಬಿದಿರೆ: ಪೆನಾಲ್ಟಿ ಶೂಟೌಟ್‌ನಲ್ಲಿ ಅಮೋಘ ಆಟ ಪ್ರದರ್ಶಿಸಿದ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈಸೂರು ವಲಯ ಅಂತರ ಕಾಲೇಜು ಪುರುಷರ ವಿಭಾಗದ ಫುಟ್‌ಬಾಲ್ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡಿತು.
ಇಲ್ಲಿನ ಆಳ್ವಾಸ್ ಕಾಲೇಜಿನ ಅರಮನೆ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಮತ್ತು ಕಣಚೂರು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ೦-೦ ಗೋಲುಗಳಿಂದ ಸಮಬಲ ಸಾಧಿಸಿತು. ಚಾಂಪಿಯನ್‌ಶಿಪ್ ನಿರ್ಧರಿಸುವ ನಿರ್ಣಾಯಕ ಪೆನಾಲ್ಟಿ ಶೂಟೌಟ್‌ನಲ್ಲಿ ಆಳ್ವಾಸ್‌ನ ಆಟಗಾರರು ಹೊಡೆದ ಎಲ್ಲ 5 ಕಿಕ್‌ಗಳು ಗೋಲನ್ನು ಮುತ್ತಿಕ್ಕಿದ್ದರೆ, ಕಣಚೂರು ತಂಡದ ಗೋಲು ಹೊಡೆಯುವ ಪ್ರಯತ್ನವನ್ನು ಆಳ್ವಾಸ್ ಗೋಲ್‌ಕೀಪರ್ ರುಮನ್ ಎರಡು ಬಾರಿ ವಿಫಲಗೊಳಿಸಿದರು. ಅಂತಿಮವಾಗಿ ಆಳ್ವಾಸ್ ತಂಡವು 5-3ಗೋಲುಗಳಿಂದ ಕಣಚೂರು ತಂಡವನ್ನು ಮಣಿಸಿ, ಪ್ರಶಸ್ತಿ ಜಯಿಸಿತು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ತಂಡವು 2-1 ಗೋಲುಗಳಿಂದ ಎಸ್‌ಸಿಎಸ್ ನರ್ಸಿಂಗ್ ಕಾಲೇಜು ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇನ್ನೊಂದು ಸೆಮಿಫೈನಲ್‌ನಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ತಂಡವನ್ನು 2-0 ಗೋಲುಗಳಿಂದ ಮಣಿಸಿದ ಕಣಚೂರು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಫೈನಲ್‌ಗೆ ಪ್ರವೇಶ ಪಡೆದಿತ್ತು. ಒಟ್ಟು 72 ತಂಡಗಳು ಸ್ಪರ್ಧಿಸಿದ್ದು, 1,150 ಆಟಗಾರರು ಟೂರ್ನಿಯಲ್ಲಿ ಪಾಲ್ಗೊಂಡರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…