ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಇವರು ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್ ಸಹ ಕರ‍್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್‌ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…