ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿದ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ಮರಳು ಲೋಡ್ ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹರೇಕಳ ದೆಬ್ಬೇಲಿ ನಿವಾಸಿ ನಾಝಿಮ್ (20) ಬಂಧಿತ ಆರೋಪಿ. ಈತ ಕಲ್ಲಾಪು ಕುದ್ರು ನೇತ್ರಾವತಿ ನದಿ ತಟದಿಂದ ಮರಳು ತೆಗೆದು ಸಾಗಾಟ ನಡೆಸುತ್ತಿರುವ ಮಾಹಿತಿ ಪಡೆದ ಉಳ್ಳಾಲ ಪೊಲೀಸರು, ಕಲ್ಲಾಪು ಬಳಿ ತಡೆಹಿಡಿದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…