ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ ಎಫ್ ಡಿ ಬಿ) ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ವಿಸ್ತರಣಾ ವಿಭಾಗ, ಮೀನುಗಾರಿಕಾ ಮಹಾವಿದ್ಯಾಲಯ, ಎಕ್ಕೂರು, ಮಂಗಳೂರಿನಲ್ಲಿ “ಕರಾವಳಿ ಪ್ರದೇಶದಲ್ಲಿ ಅಲಂಕಾರಿಕ ಮೀನುಕೃಷಿ” ಎಂಬ ವಿಷಯದ ಕುರಿತು ೩ ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹೇಶ್ ಕುಮಾರ್, ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ (ಕೆಎಫ್ ಡಿಸಿ) ಮಾತನಾಡಿ, “ಭಾರತ ದೇಶದಲ್ಲಿ ಅಲಂಕಾರಿಕ ಮೀನು ಸಂಪನ್ಮೂಲವು ಹೇರಳವಾಗಿದ್ದು, ಮೀನು ಕೃಷಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವು ಸಹಕಾರಿಯಾಗಲಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಪ್ರಸಿದ್ಧ ಅಲಂಕಾರಿಕ ಮೀನುಕೃಷಿಯ ಉದ್ಯಮಿಯಾಗಿರುವ ರೊನಾಲ್ಡ್ ಡಿಸೋಜ, ಸಂಸ್ಥಾಪಕರು, ಅಕ್ವಾಟಿಕ್ ಬಯೋಸಿಸ್ಟಮ್, ವಾಮಂಜೂರು, ಮಂಗಳೂರು ಅವರು ಶಿಭಿರಾರ್ಥಿಗಳಿಗೆ ಅಲಂಕಾರಿಕ ಮೀನಿನ ಮಾರುಕಟ್ಟೆ ವ್ಯವಸ್ಥೆ ಕುರಿತು ಕಿರು ಪರಿಚಯ ನೀಡಿದರು. ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ರವರಾದ ಡಾ. ಹೆಚ್.ಏನ್. ಆಂಜನೇಯಪ್ಪರವರು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಾಗೂ ಸಂಯೋಜಕರಾದ ಡಾ. ಎಸ್. ಆರ್. ಸೋಮಶೇಖರ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಕಾರ್ಯಕ್ರಮದ ನಿರೂಪಕಿಯಾದ ವಂದನಾ ಕೆ. ಅವರು ಮೀನುಕೃಷಿಕರು ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು. ಡಾ. ತೇಜಸ್ವಿ ಕುಮಾರ್ ಧನ್ಯವಾದ ಅರ್ಪಿಸಿದರು. ಮೀನುಗಾರಿಕಾ ಮಹಾವಿದ್ಯಾಲಯದ ಶಿಕ್ಷಕರು, ವಿದ್ಯಾರ್ಥಿಗಳು, 50 ಜನ ಶಿಬಿರಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…