ಕಡಬ ತಾಲೂಕಿನ ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಎನ್ನಲಾದ
ಪ್ರಕರಣಕ್ಕೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25. ವ) ಎಂದು ಗುರುತಿಸಲಾಗಿದೆ.

ಮತ್ತೋರ್ವ ಆರೋಪಿ ಕೈಕಂಬ ನಡೋಟ ನಿವಾಸಿ ಸಚಿನ್ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳು ಬೈಕಿನಲ್ಲಿ ಮಸೀದಿಯ ಆವರಣದ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಘಟನ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.




