ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ನಿವಾಸದ ಮೇಲಿನಿಂದ 24 ವರ್ಷದ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ನಿವಾಸದ ಮೇಲಿನಿಂದ 24 ವರ್ಷದ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನನ್ನು ಶ್ರೇಷ್ಠಾ ತಿವಾರಿ ಎಂದು ಗುರುತಿಸಲಾಗಿದ್ದು, ಲಕ್ನೋದ ಬಕ್ಷಿ ಕಾ ತಲಾಬ್‌ನ ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅವರ ಮಾಧ್ಯಮ ಸಲಹೆಗಾರರಾಗಿ ಶ್ರೇಷ್ಠಾ ತಿವಾರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಶ್ರೇಷ್ಠಾ ತಿವಾರಿ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದು, ಆಕೆಯ ಜತೆಗೆ ಜಗಳವಾಡಿ ಮನನೊಂದು ಆತ್ಮಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಈ ಯುವಕ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವತಿಗೆ ವಿಡಿಯೋ ಕಾಲ್ ಮಾಡಿದ್ದು, ಈ ವೇಳೆ ಯುವತಿಯು ಈ ವಿಡಿಯೋ ಕಾಲ್ನ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಂಡಿದ್ದಾಳೆ. ಇಬ್ಬರು ನಾಲ್ಕು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಯಾವುದೋ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ವಿಷಯ ತಿಳಿಯುತ್ತಿದ್ದಂತೆ ಯುವತಿ ಶ್ರೇಷ್ಠಾ ತಿವಾರಿ ಆತ್ಮಹತ್ಯೆ ಮಾಡಿಕೊಂಡು ಸ್ಥಳಕ್ಕೆ ಧಾವಿಸಿದ್ದಾಳೆ. ಪೊಲೀಸರ ವರದಿ ಪ್ರಕಾರ ಇಲ್ಲಿಯವರೆಗೆ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಜತೆಗೆ ಇದಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಇದೀಗ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಯುವತಿಯ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.



