ಕರಾವಳಿ

ಅಡ್ಕಸ್ಥಳದಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ ಬಸ್ಸು ಡಿಕ್ಕಿ; ಮಣಿಯಂಪಾರೆ ನಿವಾಸಿ ಮೃತ್ಯು


ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆಎಸ್ಸಾರ್ಟಿಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ ಮುಸ್ತಾಫ ಪಜ್ಜಾನ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಎದುರಿನಿಂದ ಬಂದ ಕಾರೊಂದನ್ನು ತಪ್ಪಿಸುವ ರಭಸದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ಸು ಪಿಕ್ ಆಪ್ ಗೆ ಬಡಿದಿದ್ದು ತಲೆಗೆ ತೀವ್ರ ಗಾಯಗೊಂಡಿರುವ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ದರು ಜೀವ ಉಳಿಸಲಾಗಿಲ್ಲ.

ಇವರು ಸಹ ಕೆಲಸಗಾರರೊಂದಿಗೆ ಅಡಿಕೆ ಸಸಿ ತರಲು ತೆರಳಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು ಜತೆಗಿದ್ದ ಇನ್ನೊರ್ವರಿಗೂ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ. ಬದಿಯಡ್ಕ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…

30 mins ago

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…

31 mins ago

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…

33 mins ago

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…

36 mins ago

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…

38 mins ago

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…

40 mins ago