ಮುಲ್ಕಿ: ಕೆಮ್ರಾಲ್ ಗ್ರಾಮ ಪಂಚಾಯತ್ ನ 2022- 23ನೇ ಸಾಲಿನ ಜಮಾ ಬಂಧಿ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಂಚಾಯತ್ ಅಧ್ಯಕ್ಷ ಮಯ್ಶದ್ದಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ವತಿಯಿಂದ ಕಾಮಗಾರಿಗಳು ಗ್ರಾಮಸ್ಥರ ಸಹಕಾರದಿಂದ ನಿರಂತರವಾಗಿ ನಡೆಯುತ್ತಿದ್ದು ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಾಮಗಾರಿಗಳ ಲೆಕ್ಕಪತ್ರ ಪರಿಶೀಲನೆಯ ಜಮಾಬಂಧಿ ಕಾರ್ಯಕ್ರಮವು ಪಾರದರ್ಶಕತೆಗೆ ಪೂರಕವಾಗಿದೆ. ಈ ಬಾರಿ ಕೆಮ್ರಾಲ್ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪಂಚಾಯತ್ ಸದಸ್ಯರ, ಆಡಳಿತ ಸಿಬ್ಬಂದಿ, ಗ್ರಾಮಸ್ಥರ ಸಹಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ತಾ.ಪಂ. ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಪಕ್ಷಭೇದ ಮರೆತು ಪ್ರಯತ್ನಿಸಬೇಕು ಎಂದರು.
ಪಿಡಿಒ ಅರುಣ್ ಪ್ರದೀಪ್ ಡಿಸೋಜಾ ಜಮಾ ಬಂದಿಯ ಖರ್ಚಿನ ವಿವರಗಳ ಬಗ್ಗೆ ಮಾಹಿತಿ ನೀಡಿದರು
ಸಭೆಯಲ್ಲಿ ಉಪಾಧ್ಯಕ್ಷೆ ಶೋಭಾ ಮಾಜೀ ಪಂ.ಅಧ್ಯಕ್ಷೆ ಲೀಲಾ ಕೃಷ್ಣಪ್ಪ, ಮಾಜಿ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಪಂಜ ,ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಹರಿಶ್ಚಂದ್ರ, ಲೆಕ್ಕ ಸಹಾಯಕ ಕೇಶವ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಇಲಾಖೆಯ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…