ಮುಲ್ಕಿ: ಕರ್ನಾಟಕ ಸರಕಾರದ ಪಂಚಾಯತ್ ರಾಜ್ಆಯುಕ್ತಾಲಯ ವತಿಯಿಂದ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ಆಯ್ಕೆಯಾಗಿದೆ.

ಕೆಮ್ರಾಲ್ ಗ್ರಾಮ ಪಂಚಾಯತ್ ಕಳೆದ ಎರಡುವರೆ ವರ್ಷಗಳಲ್ಲಿ ಗ್ರಾಮೀಣಮಟ್ಟದಲ್ಲಿ ಸ್ವಚ್ಛತೆ, ಕುಡಿಯುವ
ನೀರು ಸಹಿತ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿದ್ದು, ಅರ್ಹವಾಗಿಯೇ ಪ್ರಶಸ್ತಿಗೆ ಆಯ್ಕೆಯಾಗಿದೆ.
ಕಳೆದ ಎರಡುವರೆ ವರ್ಷದ ಆಡಳಿತದ ಅವಧಿಯಲ್ಲಿ ಲೀಲಾ ಕೃಷ್ಣಪ್ಪ ಅಧ್ಯಕ್ಷರಾಗಿ ಸುರೇಶ್ ಪಂಜ
ಉಪಾಧ್ಯಕ್ಷರಾಗಿ ಆಡಳಿತ ನಡೆಸಿದ್ದರೆ ಪ್ರಸ್ತುತ ಅಧ್ಯಕ್ಷರಾಗಿ ಮಯ್ಯದ್ಧಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಶೋಭಾ,
ಅಭಿವೃದ್ಧಿ ಅಧಿಕಾರಿಯಾಗಿ ಅರುಣ್ ಪ್ರದೀಪ್ ಡಿಸೋಜಾಕಾರ್ಯದರ್ಶಿಯಾಗಿ ಹರಿಚಂದ್ರ ಲೆಕ್ಕಿಗರಾಗಿ ಕೇಶವ ಸೇವೆ ಸಲ್ಲಿಸುತ್ತಿದ್ದಾರೆ.



