ಜನ ಮನದ ನಾಡಿ ಮಿಡಿತ

Advertisement

ಗಾಂಜಾ ಮಾರಾಟ : ಮೂವರು ಪೊಲೀಸರ ವಶಕ್ಕೆ

ಮೂಡಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಆರೋಪಿಗಳಿಂದ ಸ್ವಾಧೀನ ಸೊತ್ತುಗಳ ಅಂದಾಜು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನಿರ್ದೇಶನದಲ್ಲಿ ಈ ಕಾರ್ಯಚರಣೆ ನಡೆದಿದ್ದು, ಪೊಲೀಸ್ ಉಪ ನಿರೀಕ್ಷಕರಾದ ದಿವಾಕರ ರೈ, ಸಿದ್ದಪ್ಪ ನರನೂರ ಮತ್ತು ಸಿಬಂದಿಗಳಾದ ಪ್ರಶಾಂತ್, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಹುಸೇನ್, ಅಕೀಲ್ ಮಹಮ್ಮದ್, ವೆಂಕಟೇಶ್ ಮತ್ತು ಇತರ ಸಿಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಹೊಂಡಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!