ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಹೊಸಂಗಡಿ, ಅರಣ್ಯ ಇಲಾಖೆ ವೇಣೂರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ ಹೊಸಂಗಡಿ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಇನ್ನರ್ ವೀಲ್ ಕ್ಲಬ್ ಮೂಡಬಿದ್ರೆ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ,ಆಳ್ವಾಸ್ ಸಮಾಜ ಕಾರ್ಯ ಕಾಲೇಜು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳು, ಅಂಗನವಾಡಿಗಳ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ನನ್ನ ಗಿಡ ನನ್ನ ಮರ ಮತ್ತು ನನ್ನ ನೆಲ ನನ್ನ ಜಲ ಎಂಬ ವಿನೂತನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನೆಲ ಜಲ ಸಂರಕ್ಷಣೆಗೆ ಹೊಸಂಗಡಿ ಪಂಚಾಯತ್ ನ ಕ್ರಮ ಅಭಿನಂದನಾರ್ಹ ಎಂದರು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅಂತರ್ಜಲ ವೃದ್ಧಿಗಾಗಿ ಮತ್ತು ಶಾಶ್ವತ ನೀರಾವರಿಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು. ಯುವಕರು ಸಮಗ್ರ ಮತ್ತು ಮಿಶ್ರ ಕೃಷಿ ಮಾಡುವಂತೆ ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು..ಮುಖ್ಯ ಅತಿಥಿಗಳಾಗಿ ವೇಣೂರು ವಲಯ ಅರಣ್ಯಾಧಿಕಾರಿಗಳು ಶ್ರೀ ಸುಬ್ರಹ್ಮಣ್ಯ ಆಚಾರ್ ಮಾತನಾಡಿ ಹೊಸಂಗಡಿ ಗ್ರಾಮ ಪಂಚಾಯತ್ ನ ಮಾದರಿ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ ನೀಡುವ ಭರವಸೆ ಇತ್ತರು..ರೋಟರಿ ಜಿಲ್ಲೆ 3181 ನ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ನೀರಿನ ಮಿತಬಳಕೆ ಮತ್ತು ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಮೂಡಬಿದಿರೆ ಬ್ಯಾಂಕ್ ಆಫ್ ಬರೋಡ ದ ಮ್ಯಾನೇಜರ್ ಸಂತೋಷ್ ಕುಮಾರ್ ಮಾತನಾಡಿ ನೆಲ ಜಲ ಸಂರಕ್ಷಣೆಯ ಔಚಿತ್ಯದ ಬಗ್ಗೆ ವಿವರಿಸಿದರು. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಸರಿತಾ ಆಶೀರ್ವಾದ್ ರವರು ಸಪ್ತಾಹಕ್ಕೆ ಶುಭ ಹಾರೈಸಿದರು. ಪಂಚಾಯತ್ ಉಪಾಧ್ಯಕ್ಷರಾದ ಶಾಂತಾ, ಪಂಚಾಯತ್ ಸದಸ್ಯರು, ಸಂಘಸAಸ್ಥೆಗಳ ಪದಾಧಿಕಾರಿಗಳು, ಗ್ರಾಮದ ರೈತರು ಭಾಗವಹಿಸಿದ್ದರು.
ಪಂಚಾಯತ್ ಸದಸ್ಯರಾದ ಕರುಣಾಕರ ಪೂಜಾರಿ ಸ್ವಾಗತಿಸಿದರು…ಸದಸ್ಯರಾದ ಹರಿಪ್ರಸಾದ್ ಸಪ್ತಾಹದ ಉದ್ದೇಶ ಮತ್ತು ಔಚಿತ್ಯದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಎಲ್ಲ ರೈತರಿಗೆ ಸಾಂಕೇತಿಕವಾಗಿ ಗಿಡ ಗಳನ್ನು ವಿತರಿಸಲಾಯಿತು.
ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 2 ರವರಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗಳು, ಅಂಗನವಾಡಿಗಳ, ಸಾರ್ವಜನಿಕ ಸ್ಥಳಗಳಲ್ಲಿ ನೆಲ ಜಲ ಸಂರಕ್ಷಣೆಗಾಗಿ.ಗಿಡ ಗಳ ಪುನಶ್ಚೇತನ, ಗಿಡ ನೆಡುವುದು, ಅರಿವು ಕಾರ್ಯಕ್ರಮಗಳು, ಮಕ್ಕಳಿಗೆ ಸ್ಪರ್ಧೆಗಳು, ಸ್ವಚ್ಛತಾ ಕಾರ್ಯಕ್ರಮಗಳು, ಯುವಕರಿಗೆ, ಮಹಿಳೆಯರಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಹಾಗೂ ಜನ ರ ಸಹಭಾಗಿತ್ವದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ಅಕ್ಟೋಬರ್ 2 ರಂದು ಗಾಂಧೀ ಜಯಂತಿ ಯಂದು ಪೇರಿ ಯಲ್ಲಿರುವ ಪ್ರೇರಣಾ ಸೌಧದಲ್ಲಿ ನಡೆಯುವ ವಿಶೇಷ ಗ್ರಾಮಸಭೆ ಯೊಂದಿಗೆ ಸಪ್ತಾಹ ಸಂಪನ್ನ ಗೊಳ್ಳಲಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…