ಜ್ಞಾನ

“ನನ್ನ ನೆಲ ನನ್ನ ಜಲ ಎಂಬ ವಿನೂತನ ಸಪ್ತಾಹ” ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಹೊಸಂಗಡಿ, ಅರಣ್ಯ ಇಲಾಖೆ ವೇಣೂರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ ಹೊಸಂಗಡಿ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಇನ್ನರ್ ವೀಲ್ ಕ್ಲಬ್ ಮೂಡಬಿದ್ರೆ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ,ಆಳ್ವಾಸ್ ಸಮಾಜ ಕಾರ್ಯ ಕಾಲೇಜು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳು, ಅಂಗನವಾಡಿಗಳ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ನನ್ನ ಗಿಡ ನನ್ನ ಮರ ಮತ್ತು ನನ್ನ ನೆಲ ನನ್ನ ಜಲ ಎಂಬ ವಿನೂತನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನೆಲ ಜಲ ಸಂರಕ್ಷಣೆಗೆ ಹೊಸಂಗಡಿ ಪಂಚಾಯತ್ ನ ಕ್ರಮ ಅಭಿನಂದನಾರ್ಹ ಎಂದರು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅಂತರ್ಜಲ ವೃದ್ಧಿಗಾಗಿ ಮತ್ತು ಶಾಶ್ವತ ನೀರಾವರಿಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು. ಯುವಕರು ಸಮಗ್ರ ಮತ್ತು ಮಿಶ್ರ  ಕೃಷಿ ಮಾಡುವಂತೆ ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು..ಮುಖ್ಯ ಅತಿಥಿಗಳಾಗಿ ವೇಣೂರು ವಲಯ ಅರಣ್ಯಾಧಿಕಾರಿಗಳು ಶ್ರೀ ಸುಬ್ರಹ್ಮಣ್ಯ ಆಚಾರ್ ಮಾತನಾಡಿ ಹೊಸಂಗಡಿ ಗ್ರಾಮ ಪಂಚಾಯತ್ ನ ಮಾದರಿ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ ನೀಡುವ ಭರವಸೆ ಇತ್ತರು..ರೋಟರಿ ಜಿಲ್ಲೆ 3181 ನ ಸಹಾಯಕ ಗವರ್ನರ್  ರಾಘವೇಂದ್ರ ಭಟ್ ನೀರಿನ ಮಿತಬಳಕೆ ಮತ್ತು ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.

ಮೂಡಬಿದಿರೆ ಬ್ಯಾಂಕ್ ಆಫ್ ಬರೋಡ  ದ ಮ್ಯಾನೇಜರ್  ಸಂತೋಷ್ ಕುಮಾರ್ ಮಾತನಾಡಿ ನೆಲ ಜಲ ಸಂರಕ್ಷಣೆಯ ಔಚಿತ್ಯದ ಬಗ್ಗೆ ವಿವರಿಸಿದರು. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಸರಿತಾ ಆಶೀರ್ವಾದ್ ರವರು ಸಪ್ತಾಹಕ್ಕೆ ಶುಭ ಹಾರೈಸಿದರು. ಪಂಚಾಯತ್ ಉಪಾಧ್ಯಕ್ಷರಾದ ಶಾಂತಾ, ಪಂಚಾಯತ್ ಸದಸ್ಯರು, ಸಂಘಸAಸ್ಥೆಗಳ ಪದಾಧಿಕಾರಿಗಳು, ಗ್ರಾಮದ ರೈತರು ಭಾಗವಹಿಸಿದ್ದರು.

ಪಂಚಾಯತ್ ಸದಸ್ಯರಾದ ಕರುಣಾಕರ ಪೂಜಾರಿ ಸ್ವಾಗತಿಸಿದರು…ಸದಸ್ಯರಾದ ಹರಿಪ್ರಸಾದ್ ಸಪ್ತಾಹದ ಉದ್ದೇಶ ಮತ್ತು ಔಚಿತ್ಯದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಎಲ್ಲ ರೈತರಿಗೆ ಸಾಂಕೇತಿಕವಾಗಿ ಗಿಡ ಗಳನ್ನು ವಿತರಿಸಲಾಯಿತು.

ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 2 ರವರಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗಳು, ಅಂಗನವಾಡಿಗಳ, ಸಾರ್ವಜನಿಕ ಸ್ಥಳಗಳಲ್ಲಿ ನೆಲ ಜಲ ಸಂರಕ್ಷಣೆಗಾಗಿ.ಗಿಡ ಗಳ ಪುನಶ್ಚೇತನ, ಗಿಡ ನೆಡುವುದು, ಅರಿವು ಕಾರ್ಯಕ್ರಮಗಳು, ಮಕ್ಕಳಿಗೆ ಸ್ಪರ್ಧೆಗಳು, ಸ್ವಚ್ಛತಾ ಕಾರ್ಯಕ್ರಮಗಳು, ಯುವಕರಿಗೆ, ಮಹಿಳೆಯರಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಹಾಗೂ ಜನ ರ ಸಹಭಾಗಿತ್ವದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ಅಕ್ಟೋಬರ್ 2 ರಂದು ಗಾಂಧೀ ಜಯಂತಿ ಯಂದು ಪೇರಿ ಯಲ್ಲಿರುವ ಪ್ರೇರಣಾ ಸೌಧದಲ್ಲಿ ನಡೆಯುವ ವಿಶೇಷ ಗ್ರಾಮಸಭೆ ಯೊಂದಿಗೆ ಸಪ್ತಾಹ ಸಂಪನ್ನ ಗೊಳ್ಳಲಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…

23 mins ago

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…

6 hours ago

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

1 day ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

1 day ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

1 day ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

1 day ago