ಮೂಡಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳು ಪ್ರತಿಷ್ಟಿತ ಲಂಡನ್ ಸ್ಟಾಕ್ ಎಕ್ಸಚೇಂಜ್ ಗ್ರೂಪ್‌ಗೆ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ತಲಾ 11.5ಲಕ್ಷ ಪ್ಯಾಕೇಜ್‌ನೊಂದಿಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಿಜಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ನಡೆದಿತ್ತು.
ಕೊನೆಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ವಿನಯ್ ಪಿ ಹುಂಡೇಕರ್ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಖುಷಿ ವಿಕೆ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಶ್ವೇತಾ ಶರ್ಮಾ(ಇನ್ಫೋðಮೇಷನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್)ಜೇಮ್ಸ್ ಜೋಸೆಫ್ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಶ್ವೇತಾ ಸಿ(ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್) ಉನ್ನತ ಪ್ಯಾಕೇಜ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.
ವಿಶ್ವದ ಪ್ರಮುಖ ಹಣಕಾಸು ಮಾರುಕಟ್ಟೆಗಳ ಮೂಲಸೌಕರ್ಯ ಪೂರೈಕೆದಾರರಲ್ಲಿ ಒಂದಾಗಿರುವ ಲಂಡನ್ ಸ್ಟಾಕ್ ಎಕ್ಸಚೇಂಜ್ ಕಂಪೆನಿಯು, ಪ್ರಪಂಚದ 190 ದೇಶಗಳಲ್ಲಿ 40,000 ಕ್ಕೂ ಹೆಚ್ಚು ಗ್ರಾಹಕರಿಗೆ ಹಣಕಾಸಿನ ಡೇಟಾ, ವಿಶ್ಲೇಷಣೆಗಳು, ಸುದ್ದಿ ಮತ್ತು ಸೂಚ್ಯಂಕದ ಮಾಹಿತಿಯನ್ನು ನೀಡುತ್ತಿದೆ.
ಆಳ್ವಾಸ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದು ಶೈಕ್ಷಣಿಕ ವರ್ಷದಲ್ಲಿ ಸರಾಸರಿ 400ಕ್ಕೂ ಅಧಿಕ ಕಂಪೆನಿಗಳು ನೇಮಕಾತಿಗಾಗಿ ಕ್ಯಾಂಪಸ್‌ಗೆ ಆಗಮಿಸುತ್ತವೆ. ಇಲ್ಲಿ ವಿದ್ಯಾಭ್ಯಾಸ ಮಾಡುವ 90ಶೇಕಡಾ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕವೇ ಉದ್ಯೋಗ ಪಡೆಯುತ್ತಿರುವುದು ಹೆಮ್ಮೆಯ ವಿಶೇಷ. ದೇಶದ ಉನ್ನತ ಕಂಪೆನಿಗಳಾದ ಸ್ಯಾಪ್ ಲ್ಯಾಬ್ಸ್, ಇವೈ, ಕಾಗ್ನಿಝೆಂಟ್, ಅಮೇಜಾನ್, ಟಿಸಿಎಸ್, ಕೆಪಿಎಂಜಿ, ಟೊಯೋಟೊ ಕಿರ್ಲೋಸ್ಕರ್, ಎಕ್ಸೇಂಚರ್, ವಿಧುಮ್ ನೇರ ನೇಮಕಾತಿಗಾಗಿ ಸದಾ ಕ್ಯಾಂಪಸ್‌ಗೆ ಆಗಮಿಸುತ್ತವೆ. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿಯ ಜೊತೆಗೆ, ಪ್ರತಿ ವರ್ಷ ನಡೆಯುವ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶವೂ ಇರುತ್ತದೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ, ಆಳ್ವಾಸ್ ಇಂಜಿನಿಯರಿ0ಗ್ ಕಾಲೇಜಿನ ವಿದ್ಯಾರ್ಥಿಗಳಾದ ತುಳಸಿ ಹಾಗೂ ಅನೂಜ್ ಪ್ರತಿಷ್ಟಿತ ಫಿನ್‌ಟೆಕ್ ಕಂಪೆನಿ -ಜಸ್ಪೇಗೆ ೨೧ ಲಕ್ಷದ ಪ್ಯಾಕೇಜ್‌ಗೆ ಆಯ್ಕೆಯಾಗಿರುವುದು ಸಂಸ್ಥೆಯ ಗುಣಮಟ್ಟದ ಶಿಕ್ಷಣ ಹಾಗೂ ತರಬೇತಿಗೆ ಹಿಡಿದ ಕೈಗನ್ನಡಿ ಯಾಗಿದೆ.
ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…