ಮೂಡಬಿದಿರೆ: ‘ಸ್ವಯಂ ರಕ್ಷಣೆಯೇ ಅತ್ಯುತ್ತಮ ರಕ್ಷಣೆ’ ಎಂದು ಸ್ವರಕ್ಷಾ ಫಾರ್ ವುಮೆನ್ ಟ್ರಸ್ಟ್ ಸಂಸ್ಥಾಪಕ ಕಾರ್ತಿಕ್ ಎಸ್. ಕಟೀಲ್ ಹೇಳಿದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಈಚೆಗೆ ಹಮ್ಮಿಕೊಂಡ ‘ಮಹಿಳೆಯರಿಗೆ ಸ್ವರಕ್ಷಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೈಹಿಕ ಮತ್ತು ಮಾನಸಿಕ ದೌರ್ಜನ್ಯಗಳಿದ್ದು, ಶೇಕಡಾ 98.2ರಷ್ಟು ದೌರ್ಜನ್ಯಗಳು ಪರಿಚಿತರಿಂದಲೇ ನಡೆದಿವೆ. ಮೊಬೈಲ್ ಸೇರಿದಂತೆ ಯಾವುದೇ ವೈಯಕ್ತಿಕ ವಸ್ತುಗಳನ್ನು ಇತರರ ಜೊತೆ ಹಂಚಿಕೊಳ್ಳಬಾರದು ಎಂದರು.
‘ಅತಿಯಾದ ನಂಬಿಕೆ, ಅವಲಂಬನೆ, ವ್ಯಾಮೋಹಕ್ಕೆ ಒಳಗಾಗಬಾರದು. ಉಚಿತ ಮತ್ತಿತರ ಆಮಿಷದ ಸೆಳೆತಕ್ಕೂ ಒಳಗಾಗಬೇಡಿ. ವಾಹನಗಳಲ್ಲೂ ಅನಗತ್ಯ ‘ಡ್ರಾಪ್’ ನೀಡುವುದು ಅಥವಾ ಪಡೆಯುವುದು ಬೇಡ’ ಎಂದರು.
‘ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಬೇಕು’ ಎಂದು ಪೋಷಕರಿಗೆ ತಿಳಿಸಿದರು.
ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಸಂಯೋಜಕಿ ವಿನೆಟ್ ಚಂದನ ಮಸ್ಕರೇನಸ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಎನ್., ವಿಜ್ಞಾನ ವಿಭಾಗ-೯ರ ಸಂಯೋಜಕಿ ವಿದ್ಯಾ ಕೆ., ಕಾರ್ತಿಕ್ ಎಸ್. ಕಟೀಲ್ ಅವರ ತಾಯಿ ಶೋಭಲತಾ ಇದ್ದರು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…