ಪುತ್ತೂರು : ಮಾನವನು ಪ್ರಕೃತಿಯ ಅವಿಭಾಜ್ಯ ಅಂಗ. ಮಾನವರಾದ ನಾವು ಎಲ್ಲವನ್ನೂ ಪ್ರಕೃತಿಯ ಮಡಿಲಿನಿಂದ ಪಡೆಯುತ್ತೇವೆ. ನಾವೇನೇ ಸಾಧನೆ ಮಾಡಿದರೂ ಅದು ಪ್ರಕೃತಿಯ ಕೊಡುಗೆ. ಪ್ರಕೃತಿಯು ಮನುಕುಲದ ಸೊತ್ತು. ಅದನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕಗಳು ಒಂದು ಉಪಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ” ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ|ಡಾಆಂಟೊನಿ ಪ್ರಕಾಶ್ ಮೊಂತೆರೋರವರು ಅಭಿಪ್ರಾಯಪಟ್ಟರು.
ಅವರು ಕಾಲೇಜಿನ ರಾಷ್ಟ್ರೀಯ ಸೇವಾಯೋಹನೆಯ ವತಿಯಿಂದ ದತ್ತುಗ್ರಾಮವಾದ ಕೆದಂಬಾಡಿಯ ನಿಡ್ಯಾಣದ ಸರ್ವೇನಂಬ್ರ 7/P1 ಸರಕಾರಿ ಜಾಗದಲ್ಲಿ ನಡೆದ ಅರಣ್ಯ ವಿಸ್ತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಯಾದ ವಾಸುದೇವ ಎನ್ ರವರು “ಉಷ್ಣವಲಯದಲ್ಲಿರುವ ಭಾರತದಂತಹ ದೇಶಗಳಲ್ಲಿ ಒಟ್ಟು ಭೂಭಾಗದ ಶೇಕಡಾ 33ರಷ್ಟು ಪ್ರದೇಶದಲ್ಲಿ ಅರಣ್ಯವನ್ನು ಹೊಂದಿರಬೇಕು. ಆದರೆ ಈಗಿನ ಅಂಕಿ ಅಂಶಗಳ ಪ್ರಕಾರ ಶೇಕಡಾ 22ರಿಂದ 24 ಮಾತ್ರವೇ ಅರಣ್ಯ ಪ್ರದೇಶವಿದೆ. ಅರಣ್ಯದ ಕೊರತೆ ಪ್ರಾಕೃತಿಕ ವೈಪರೀತ್ಯಗಳಿಗೆ ಕಾರಣವಾಗುತ್ತದೆ. ಈ ದಿಸೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವಿತಯಿಂದ ದತ್ತು ಗ್ರಾಮದಲ್ಲಿ ಅರಣ್ಯ ವಿಸ್ತರಣೆಯ ಪುಟ್ಟ ಪ್ರಯತ್ನ” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಾಗುವಾನಿ, ಬೇಂಗ, ಹಲಸು, ಹೆಬ್ಬಲಸು, ಬೀಟಿ, ನೇರಳೆ, ಪುನರ್ಪುಳಿ ಮುಂತಾದ ನೂರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು. ಈ ಕಾರ್ಯಕ್ರಮಕ್ಕೆ ಕೆದಂಬಾಡಿ ಗ್ರಾಮ ಪಂಚಾಯತ್ ಸಂಪೂರ್ಣ ಸಹಕಾರ ನೀಡಿದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ ಕೆ, ಅಧ್ಯಕ್ಷರಾದ ಸುಜಾತ ಎನ್, ಉಪಾಧ್ಯಕ್ಷರಾದ ಜಯಲಕ್ಷ್ಮಿ, ಸದಸ್ಯರಾದ ವಿಠಲರವರು ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಯಾದ ಪುಷ್ಪ ಎನ್, ಕಾರ್ಯದರ್ಶಿ ವೈಷ್ಣವಿ ಕೆ, ಘಟಕ ನಾಯಕರಾದ ಸಿಂಚನ್, ಕಾಲೇಜಿನ ಹಿತೈಷಿ ಪೊನ್ನಪ್ಪರವರು ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಭಾಗವಹಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…