ಜನ ಮನದ ನಾಡಿ ಮಿಡಿತ

Advertisement

ನಕಲಿ ನೋಟು ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಹೆಡೆಮುರಿಕಟ್ಟಿದ ಪೊಲೀಸರು

ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಪುತ್ತೂರು ತಾಲೂಕಿನ ನೆಲ್ಯಾಡಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಅಬ್ಬಾಸ್ ಅವರ ಮಗ ಇಬ್ರಾಹಿಂ (55) ಬಂಧಿತ ಆರೋಪಿ.


2004 ರಲ್ಲಿ ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಆರೋಪಿ ಶರಣಾಗತನಾಗಿದ್ದು, ಈತ ತಲೆಮರೆಸಿಕೊಂಡಿದ್ದ.


ಇದೀಗ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ಮಾರ್ಗದರ್ಶನದಂತೆ ಸಿಬ್ಬಂದಿಗಳಾದ ಗಣೇಶ್ ಮತ್ತು ಗೋಪಾಲಕೃಷ್ಣ ಅವರು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.
ಇದೀಗ ಆರೋಪಿಯನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ‌ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!