ಅಣ್ಣ ತಂಗಿಯರ ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಕುಂಬಳೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15ರ ಹರೆಯದ ಹಾಗೂ 22ರ ಹರೆಯದ ಹೆಣ್ಮಕ್ಕಳು ನಿಗೂಢವಾಗಿ ನಾಪತ್ತೆಯಾದವರು.
ವರ್ಕಾಡಿ ನಿವಾಸಿ 15ರ ಹರೆಯದ ಬಾಲಕಿಯ ಹೆತ್ತವರು ಉಳ್ಳಾಲದಲ್ಲಿ ನಡೆದಿದ್ದ ವಿವಾಹಕ್ಕೆ ತೆರಳಿದ್ದರು. ಇಬ್ಬರು ಹೆಣ್ಮಕ್ಕಳ ಸಹಿತ ನಾಲ್ವರು ಮಕ್ಕಳು ಮನೆಯಲ್ಲಿ ಉಳಿದುಕೊಂಡಿದ್ದರು. ಸಂಜೆ ಮನೆಗೆ ವಾಪಸಾದಾಗ ಮಗಳು ನಾಪತ್ತೆಯಾಗಿದ್ದಳು. ಉಳಿದ ಮಕ್ಕಳಲ್ಲಿ ಪ್ರಶ್ನಿಸಿದಾಗ ಬಾಲಕಿ ಮುಟ್ಟಂಗೆ ತೆರಳಿರುವುದಾಗಿ ತಿಳಿಸಿದ್ದಾರೆ.
ಬಾಲಕಿಯ ತಂದೆ ಮುಟ್ಟಂನಲ್ಲಿರುವ ಸಹೋದರಿಯ ಮನೆಗೆ ಕರೆ ಮಾಡಿ ವಿಚಾರಿಸಿದಾಗ ತನ್ನ 22ರ ಹರೆಯದ ಯುವತಿಯೂ ನಾಪತ್ತೆಯಾಗಿದ್ದಾಳೆಂದು ತಿಳಿಸಿ ದ್ದಾರೆ. ಈ ಇಬ್ಬರು ಜತೆಯಾಗಿ ಹೋಗಿರಬಹುದೆಂದು ಶಂಕಿಸಿ ಇತರೆಡೆ ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಮತು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ನಡೆಸಿದ ತನಿಖೆಯಲ್ಲಿ ಇವರಿಬ್ಬರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದು ತಿಳಿದು ಬಂದಿದೆ.
ಇವರ ಪತ್ತೆಗೆ ವಿವಿಧ ಸ್ಥಳಗಳಲ್ಲಿರುವ ಸಿಸಿಟಿವಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…