ಜನ ಮನದ ನಾಡಿ ಮಿಡಿತ

Advertisement

ಕಾರವಾರ : ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್ -ಪುತ್ತೂರಿನ ಯುವಕ ಅರೆಸ್ಟ್..!

ಕಾರವಾರ : ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕಲ್ ಮೇಲ್ ಮಾಡಿ ಹಣ ವಸೂಲಿಗೆ ಯತ್ನಿಸಿದ್ದ  ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರಿನ ಯುವಕನನ್ನ ಕಾರವಾರ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದಾನೆ. ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ. 2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.

ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.

ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ  ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿ ಪ್ರಶಾಂತ ಭಟ್ ಮಾಣಿಲನನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!