ಕಾರವಾರ : ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕಲ್ ಮೇಲ್ ಮಾಡಿ ಹಣ ವಸೂಲಿಗೆ ಯತ್ನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನನ್ನ ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದಾನೆ. ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ. 2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿ ಪ್ರಶಾಂತ ಭಟ್ ಮಾಣಿಲನನ್ನು ಪೊಲೀಸರು ಬಂಧಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…