ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಗ್ರಾಮೀಣ ಭಾಗದ ಕೃಷಿಕರಿಗೆ ಸವಲತ್ತು ಪಡೆಯಲು ಸಹಕಾರಿ ಸಂಘಗಳು ಅಗತ್ಯ -ದುಗ್ಗಣ್ಣ ಸಾವಂತರು

ಮುಲ್ಕಿ: ಮುಲ್ಕಿ ವಲಯದ ಪಡುಪಣಂಬೂರು ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ, ಕರ್ನಾಟಕ ಸರಕಾರ ತೋಟಗಾರಿಕಾ ಇಲಾಖೆಯ ಸಹಯೋಗದಡಿ ಮತ್ತು ಬೆಂಗಳೂರು ಐಸಿಸಿಒಎ ಸಂಪನ್ಮೂಲ ಸಂಸ್ಥೆ ಸಹಭಾಗಿತ್ವದಲ್ಲಿ ವಾರ್ಷಿಕ ಮಹಾಸಭೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ ಬೆಳೆಗಾರರ ಸಂಘದ ಅಧ್ಯಕ್ಷರಾದ ವಿಜಯ ಶೆಟ್ಟಿ ಕೋಲ್ನಾಡು ವಹಿಸಿದ್ದರು.
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಪ್ರತಿ ಗ್ರಾಮದ ಕೃಷಿಕರು ಪಡೆಯುವಂತಾಗಲು ಸಹಕಾರ ಸಂಘಗಳು ಅಗತ್ಯ ಎಂದರು
ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಿ ಮಾತನಾಡಿ ಯುವ ಜನಾಂಗಕ್ಕೆ ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ವಿನಯ ಬೆಳಗಾರರ ಸಂಘ ಗ್ರಾಮಕ್ಕೆ ಮಾದರಿ ಎಂದರು.


ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ಲೋಗೋ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ, ಮುಲ್ಕಿ ಹೋಬಳಿಯ ಕೃಷಿ ಅಧಿಕಾರಿ ವಸಂತ್ ಶ್ರೀನಿವಾಸ್ ಕುಲಕರ್ಣಿ, ಸಹಾಯಕ ತೋಟಗಾರಿಕಾ ಅಧಿಕಾರಿ ಯುಗೇಂದ್ರ, ಬೆಂಗಳೂರು ಐಸಿಸಿಒಎ ಹಿರಿಯ ಮುಖ್ಯಸ್ಥ ಭಾನುಪ್ರಕಾಶ್, ಜಿಲ್ಲಾ ಸಂಯೋಜಕ ಸತೀಶ್ ನಾಯ್ಕ, ವಿಜಯ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾ ಸದಾಶಿವ ಶೆಟ್ಟಿ, ಪುರುಷೋತ್ತಮ ಕೆ. ಕೋಟ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ನವೀನ್ ಶೆಟ್ಟಿಎಡ್ಮೆಮಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!