ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸೇತುವೆಗೆ ಡಿಕ್ಕಿ ಹೊಡೆದ ಬೈಕ್..! 40 ಅಡಿ ಆಳದ ಹೊಳೆಗೆ ಬಿದ್ದ ಪಾಕ ಪ್ರವೀಣ ಹರ್ಷವರ್ಧನ ಭಟ್

ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್ ಅವರು ಕಾರ್ಯನಿಮಿತ್ತ ಇಂದು ಬೆಳಗಿನ ಜಾವ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ 40ಅಡಿ ಆಳದ ಹೊಳೆಗೆ ಬಿದ್ದಿದ್ದಾರೆ. ಕೊಡಂಗಾಯಿ ಹೊಳೆ ಸಮೀಪ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಈ ಬಗ್ಗೆ ಸ್ಥಳೀಯರು ನೋಡಿದ್ದಾರೆ.

ಹುಡುಕಿದಾಗ ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಬಂದಿದೆ. ತಕ್ಷಣವೇ ಹೊಳೆ ನೀರಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ರಸ್ತೆಗೆ ತಂದು ವಿಚಾರಿಸಿದಾಗ ತಾನು ಮಂಕುಡೆಯ ಹರ್ಷವರ್ಧನ ಎಂಬ ಪರಿಚಯ ಹೇಳಿದ್ದಾರೆ.

ಬಳಿಕ ಗಾಯಾಳುವನ್ನು ಉಪಚರಿಸಿದ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!