ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕರಾದ ಅಶೋಕ್ ರೈ ಯವರು ಕೋಡಿಂಬಾಡಿ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಥಮ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲಾಗಿದೆ. ಕಂಬಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಈಗಾಗಲೇ ಸಿದ್ಧತಾ ಕೆಲಸಗಳು ನಡೆದಿವೆ. ಕಂಬಳ ಯಶಸ್ವಿಯಾಗಲಿ ಎಂದು ಶಾಸಕರು ಪ್ರಾರ್ಥನೆ ಸಲ್ಲಿಸಿದರು.



