ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ.
ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಿಂದ ಕಾಲೇಜು ಹೋಗುತ್ತಿದ್ದಳು.
ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…