ಜನ ಮನದ ನಾಡಿ ಮಿಡಿತ

Advertisement

ಮಂಗಳೂರು:  ಮನೆಗೆ ನುಗ್ಗಿ 5.ಲಕ್ಷ ರೂ‌. ಮೌಲ್ಯದ ಚಿನ್ನಾಭರಣ ಕಳವು – ಇಬ್ಬರ ಬಂಧನ

ಮಂಗಳೂರು: ಬಜಪೆ ಠಾಣೆಯ ಕೆಲವೆಡೆ ಶನಿವಾರ ನಡೆದ ಮನೆ ಕಳವು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದು, ಸುಮಾರು ರೂ. 5 ಲಕ್ಷ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ತೌಸೀಫ್ ಅಹ್ಮದ್ (34), ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಫರಾಝ್ (27) ಬಂಧಿತ ಆರೋಪಿಗಳು.

ಮಾಹಿತಿ ಪಡೆದ ಬಜ್ಪೆ ಠಾಣೆ ಸಬ್ ಇನ್ಸ್ ಪೆಕ್ಟರ್ ಗುರಪ್ಪ ಕಾಂತಿ ನೇತೃತ್ವದ ತಂಡ ಸೆ. 29ರಂದು ಸಂಜೆ 4 ಗಂಟೆ ಸುಮಾರಿಗೆ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ತೌಸೀಫ್ ಅಹ್ಮದ್ ಮತ್ತು ಮೊಹಮ್ಮದ್ ಫರಾಝ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿತು.

ಬಳಿಕ ಅವರಿಂದ ಸುಮಾರು 5 ಲಕ್ಷ ರೂ. ಮೌಲ್ಯದ 75 ಗ್ರಾಂ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ವಾಹನ (ಬೈಕ್) ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರ ಪೊಲೀಸ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ ಗೋಯೆಲ್, ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪವಿಭಾಗ ಎಸಿಪಿ ಮನೋಜ್ ಕುಮಾರ್ ಮತ್ತು ಬಜಪೆ ಪೊಲೀಸ್ ನಿರೀಕ್ಷಕ ಗುರುರಾಜ್ ಅವರ ನೇತೃತ್ವದಲ್ಲಿ ಉಪನಿರೀಕ್ಷಕರುಗಳಾದ ಗುರಪ್ಪ ಕಾಂತಿ, ರೇವಣಸಿದ್ದಪ್ಪ, ಕುಮಾರೇಶನ್, ಲತಾ, ಎ ಎಸ್ ಐ ರಾಮ ಪೂಜಾರಿ, ರಶೀದಾ ಶೇಖ್, ಸುಜನ್, ದುರ್ಗಾಪ್ರಸಾದ್ ಶೆಟ್ಟಿ, ಮಂಜುನಾಥ, ಬಸವರಾಜ್ ಪಾಟೀಲ್, ಜಗದೀಶ್, ದಯಾನಂದ, ಮಧು, ಅನಿಲ್, ಕೆಂಚಪ್ಪ ಮತ್ತಿತರರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!