ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಲ್ಲಡ್ಕ ಸರ್ವೀಸ್ ರಸ್ತೆಯ ಚರಂಡಿಗೆ ಲಾರಿ ಬಿದ್ದು ಸಂಚಾರಕ್ಕೆ ತಡೆ…!!

ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಕಲ್ಲಡ್ಕ ಸರ್ವೀಸ್ ರಸ್ತೆಯ ಚರಂಡಿಗೆ ಘನಗಾತ್ರದ ಲಾರಿಯೊಂದು ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಅ.1 ರಂದು ಆದಿತ್ಯವಾರ ಬೆಳಿಗ್ಗೆ ವೇಳೆ ನಡೆದಿದೆ.


ಕಲ್ಲಡ್ಕದ ಪೇಟೆಯಿಂದ ಸ್ವಲ್ಪ ಮುಂದೆ ಪೂರ್ಲಿಪಾಡಿ ನಡುವೆ ಸರ್ವೀಸ್ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ತಾತ್ಕಾಲಿಕವಾಗಿ ಮಾಡಲಾದ ಚರಂಡಿಗೆ ಲಾರಿ ಬಿದ್ದಿದೆ.
ನಿಜವಾಗಿ ಹೇಳಬೇಕೆಂದರೆ ಇಲ್ಲಿ ರಸ್ತೆ ಮತ್ತು ಚರಂಡಿ ಎರಡು ಒಂದೇ ರೀತಿಯಲ್ಲಿ ಸಮನಾಗಿದೆ. ಹಾಗಾಗಿ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿ ರಸ್ತೆಯ ಬದಿಗೆ ಸರಿದರೆ ವಾಹನಗಳು ಹೂತು ಹೋಗುವುದು ಗ್ಯಾರಂಟಿ.
ಕಲ್ಲಡ್ಕ ಪೇಟೆ ಉಳಿಸುವ ಸಲುವಾಗಿ ಇಲ್ಲಿ ಪ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ.


ಪ್ಲೈ ಓವರ್ ನಿರ್ಮಾಣ ಮಾಡುವ ಸಂದರ್ಭ ಎರಡು ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಲಾಗಿದೆ.
ಆದರೆ ಸರ್ವೀಸ್ ರಸ್ತೆಯನ್ನು ಪರಿಪೂರ್ಣ ರೀತಿಯಲ್ಲಿ ಮಾಡದೆ ಜನರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ ಎಂಬುದು ಸಾರ್ವಜನಿಕ ಆರೋಪ. ಕನಿಷ್ಟ ಡಾಮರೀಕರಣ ಮಾಡಿದರೆ ಇವರ ಪ್ಲೈ ಓವರ್ ಕಾಮಗಾರಿ ಮುಗಿಯುವವರೆಗೆ ಸಂಚಾರ ಮಾಡಬಹುದಿತ್ತು. ಇದೀಗ ಕೆಸರು ಮಿಶ್ರಿತ ಅವೈಜ್ಞಾನಿಕ ರೀತಿಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಒಂದು ಕಡೆಯಾದರೆ, ಇನ್ನೊಂದು ಕಡೆ ವಾಹನಗಳ ಅಪಘಾತಗಳು ನಿತ್ಯ ಸಂಭವಿಸುತ್ತಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!