ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಮೋದಿಜಿಯವರ ಬಹುದೊಡ್ಡ ಯೋಜನೆಯಾದ ಸ್ವಚ್ಛತಾ ಆಂದೋಲನದ ಅಂಗವಾಗಿ ನೆಹರು ಯುವ ಕೇಂದ್ರ ಮಂಗಳೂರು, ಪಡು ಪಣಂಬೂರು ಗ್ರಾಮ ಪಂಚಾಯತ್,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ತೋಕೂರು ದೇವಸ್ಥಾನದ ಸುತ್ತಮುತ್ತಲಿನ ಪರಿಸರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗಲು ಸಹಕಾರಿ .ಸ್ವಚ್ಛತೆಗೆ ನಮ್ಮ ಆದ್ಯತೆಯೆಂದು ಪಡುಪಣಂಬೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಕುಸುಮಾ ಚಂದ್ರಶೇಖರ್ ಈ ಸಂದರ್ಭದಲ್ಲಿ ಹೇಳಿದರು. ಯುವಕ ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಶೆಟ್ಟಿಗಾರ್, ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಅನುಪಮಾ ಎ ರಾವ್, ಪಡು ಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಶ್ರೀ ಹೇಮನಾಥ ಅಮೀನ್ ಪಡು ಪಣಂಬೂರು ಗ್ರಾಮ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸುಧೀರ್ ಹಾಗೂ ಪಂಚಾಯತ್ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…